ಕಬಿನಿ ನೀರಾವರಿ ಇಲಾಖೆ ಕಚೇರಿ ಮುಂದೆ ರೈತರ ಧರಣಿ
ಚಾಮರಾಜನಗರ, ಜು.2: ಚಾಮರಾಜನಗರ ಜಿಲ್ಲೆಯ ಕೆರೆಕಟ್ಟೆಗಳನ್ನು ತುಂಬಿಸದೆ ತಮಿಳುನಾಡಿಗೆ ಕಬಿನಿ ಜಲಾಶಯದಿಂದ ನೀರು ಬಿಟ್ಟಿರುವುದನ್ನು ವಿರೋಧಿಸಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಕಬಿನಿ ನೀರಾವರಿ ಇಲಾಖೆ ಮುಂದೆ ರೈತರು, ರೈತ ಸಂಘಟನೆಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.
ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳದ ಉಸ್ತುವಾರಿ ಸಚಿವರು ಜಿಲ್ಲೆಗೆ ಹೋದೆಯ ಪುಟ್ಟ, ಬಂದೆಯ ಪುಟ್ಟ ಎಂಬಂತೆ ಬಂದು ಹೋಗುತ್ತಿದ್ದಾರೆಯೇ ಹೊರತು ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿಲ್ಲ. ಇಂತಹ ಉಸ್ತುವಾರಿ ಸಚಿವರಿಂದ ಜಿಲ್ಲೆ ಹಿಂದುಳಿದಿದೆ ಎಂದು ಸಚಿವ ಸುರೇಶ್ ಕುಮಾರ್ ವಿರುದ್ಧ ಹರಿಹಾಯ್ದ ರೈತರು ತಕ್ಷಣವೆ ಜಿಲ್ಲಾ ಉಸ್ತುವಾರಿ ಸಚಿವರನ್ನುಬದಲಾಯಿಸುವಂತೆ ಒತ್ತಾಯ ಮಾಡಿದರು.
Next Story





