Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ...

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ನಿರ್ಮಲಾ ಸೀತಾರಾಮನ್ ಒಪ್ಪಿಗೆ: ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ2 July 2021 10:32 PM IST
share
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ನಿರ್ಮಲಾ ಸೀತಾರಾಮನ್ ಒಪ್ಪಿಗೆ: ಸಚಿವ ಬೊಮ್ಮಾಯಿ

ಬೆಂಗಳೂರು, ಜು. 2: `ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಿದ್ದಾರೆ' ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆಂದು ತಿಳಿಸಿದ ಸಚಿವ ಬೊಮ್ಮಾಯಿ, `ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿ, ಕೇಂದ್ರ ಸರಕಾರದ ವಿವಿಧ ಯೋಜನೆಗಳ ಕುರಿತು ನಿರ್ಮಲಾ ಸೀತಾರಾಮನ್ ಜತೆ ಚರ್ಚೆ ನಡೆಸಲಾಯಿತು. ಕೇಂದ್ರ ಸರಕಾರದಿಂದ ವಿವಿಧ ಯೋಜನೆಗಳಡಿ ರಾಜ್ಯ ಸರಕಾರಕ್ಕೆ ಬಿಡುಗಡೆಯಾಗಬೇಕಿರುವ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸೀತಾರಾಮನ್, ತ್ವರಿತ ಗತಿಯಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ತನ್ನ ಪಾಲಿನ ಆರ್ಥಿಕ ನೆರವು ನೀಡುವುದು ಎಂದು ಭರವಸೆ ನೀಡಿದರು ಎಂದರು.

ಹಿಂದಿನ ವರ್ಷದ ಜಿಎಸ್ಟಿ ಪರಿಹಾರ ಬಾಕಿ 11,800 ಕೋಟಿ ರೂಪಾಯಿ ಹಣವನ್ನು ರಾಜ್ಯಕ್ಕೆ ನೀಡಲು ಕ್ರಮಕೈಗೊಳ್ಳಲಾಗುವುದು. ಈ ಬಾರಿಯಂತೆ ಜಿಎಸ್ಟಿ ಪರಿಹಾರ 18 ಸಾವಿರ ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರಕಾರ ಸಾಲ ಪಡೆದು ರಾಜ್ಯಕ್ಕೆ ಒದಗಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆಂದು ವಿವರಿಸಿದ ಬೊಮ್ಮಾಯಿ, 2021-22ನೆ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸಂಗ್ರಹವಾಗಿರುವ ಜಿಎಸ್ಟಿ ಪಾಲಿನ ಮೊದಲ ಕಂತನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಅದಕ್ಕೆ ಸಚಿವರು ಒಪ್ಪಿಗೆ ನೀಡಿದರು ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆ ಮತ್ತು ಕೋವಿಡ್ ಮೂರನೆ ಅಲೆ ತಯಾರಿಗೆ ಬೇಕಾದ ಹಣಕಾಸಿನ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆಯಾಯಿತು. ಕೋವಿಡ್ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ಅಭಾವ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ನೀಡಿದ್ದಾರೆ. ರಾಜ್ಯ ಸರಕಾರ ಕೋವಿಡ್ ಎರಡನೆ ಅಲೆಯನ್ನು ನಿರ್ವಹಣೆ ಮಾಡಿದ ರೀತಿ, ಬಡವರಿಗೆ ನೀಡಲಾದ ಪ್ಯಾಕೇಜ್, ಕೋವಿಡ್‍ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂ.ಪರಿಹಾರ, ಖಾಸಗಿ ಆಸ್ಪತ್ರೆಗಳ ಸಹಕಾರದೊಂದಿಗೆ ಕೋವಿಡ್ ಎರಡನೆ ಅಲೆಯನ್ನು ನಿರ್ವಹಣೆ ಮಾಡಿದ ರಾಜ್ಯ ಸರಕಾರದ ಕ್ರಮಕ್ಕೆ ನಿರ್ಮಲಾ ಸೀತಾರಾಮನ್ ಹರ್ಷ ವ್ಯಕ್ತಪಡಿಸಿದರು ಎಂದು ಅವರು ಮಾಹಿತಿ ನೀಡಿದರು.

ಕೇಂದ್ರ ವಿತ್ತ ಸಚಿವೆ ನಿಮರ್ಲಾ ಸೀತಾರಾಮನ್ ಅವರೊಂದಿಗಿನ ಭೇಟಿ ಯಶಸ್ವಿಯಾಗಿದೆ. ರಾಜ್ಯದ ಬೇಡಿಕೆಗಳಿಗೆ ಅವರು  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಪರಿಹಾರದ ಬಾಕಿ ಹಣ ಬಿಡುಗಡೆಗೆ ಒಪ್ಪಿದ್ದಾರೆ. ಕೋವಿಡ್ ನಿರ್ವಹಣೆಗೆ ಆರ್ಥಿಕ ನೆರವಿನ ಭರವಸೆ ನೀಡಿದ್ದಾರೆ

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X