Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಧ್ವನಿವರ್ಧಕಕ್ಕೆ ನಿಯಂತ್ರಣ ಕೋರಿ ಅರ್ಜಿ:...

ಧ್ವನಿವರ್ಧಕಕ್ಕೆ ನಿಯಂತ್ರಣ ಕೋರಿ ಅರ್ಜಿ: ಒಂದೇ ಧರ್ಮವನ್ನು ಗುರಿಯಾಗಿಸಲು ಅವಕಾಶ ನೀಡುವುದಿಲ್ಲ ಎಂದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ3 July 2021 5:20 PM IST
share
ಧ್ವನಿವರ್ಧಕಕ್ಕೆ ನಿಯಂತ್ರಣ ಕೋರಿ ಅರ್ಜಿ: ಒಂದೇ ಧರ್ಮವನ್ನು ಗುರಿಯಾಗಿಸಲು ಅವಕಾಶ ನೀಡುವುದಿಲ್ಲ ಎಂದ ಹೈಕೋರ್ಟ್

ಬೆಂಗಳೂರು, ಜು.3: ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಸುವುದಕ್ಕೆ ಸಂಬಂಧಿಸಿದಂತೆ ಕೇವಲ ಒಂದು ಧರ್ಮವನ್ನು ಗುರಿಯಾಗಿಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಹೇಳಿದೆ.

2010ರ ಶಬ್ದ ಮಾಲಿನ್ಯ ನಿಯಂತ್ರಣಾ ನಿಯಮಗಳ ಉಲ್ಲಂಘನೆಯಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಉಲ್ಲಂಘನೆ ಕೇವಲ ಒಂದೇ ಧರ್ಮದಿಂದ ಆಗಿರುವುದಕ್ಕೆ ಸಾಧ್ಯವಿಲ್ಲ. ನೀವು ಕೇವಲ ಒಂದು ಧರ್ಮವನ್ನು ಗುರಿಯಾಗಿಸಿಕೊಂಡಿದ್ದರೆ, ಅದು ನಿಮ್ಮ ಸದುದ್ದೇಶದ ಕೊರತೆಯನ್ನು ತೋರಿಸುತ್ತದೆ ಎಂದು ಪೀಠ ಹೇಳಿದೆ. 

ಅರ್ಜಿದಾರರ ಪರ ವಾದಿಸಿದ ವಕೀಲ ಬಿ.ಎನ್.ಜಗದೀಶ್ ಅವರು, ನಾನು ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಕೂಡ ಶಬ್ದ ಮಾಲಿನ್ಯ ನಿಯಂತ್ರಣಾ ನಿಯಮಗಳ ಉಲ್ಲಂಘನೆ ಆಗಿರುವುದರ ಕುರಿತು ಈಗಾಗಲೇ ಪೀಠದ ಗಮನಕ್ಕೆ ತಂದಿದ್ದೇನೆ. ಧಾರ್ಮಿಕ ಸಂಸ್ಥೆಗಳಿಂದ ಧ್ವನಿವರ್ಧಕ ಬಳಕೆ ತಡೆಯುವಂತೆ ಮನವಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. 

ಸರಕಾರಿ ಪರ ವಕೀಲರು ವಾದಿಸಿ, ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಪರಿಸರ(ಸಂರಕ್ಷಣೆ) ಕಾಯಿದೆ 1986ರ ಸೆಕ್ಷನ್ 19(ಎ) ಅಡಿಯಲ್ಲಿ ಸಹಾಯಕ ಪೊಲೀಸ್ ಕಮಿಷನರ್ ಅವರಿಗೆ ಸರಕಾರ ಈಗಾಗಲೇ ಅಧಿಕಾರ ನೀಡಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಹೇಳಿಕೆಗೆ ಸಂಬಂಧಿಸಿದಂತೆ ಸುತ್ತೋಲೆಯನ್ನು ದಾಖಲೆಯಲ್ಲಿ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶಿಸಿತು.

ಕೆಎಸ್‌ಪಿಸಿಬಿ ಹಿರಿಯ ಅಧಿಕಾರಿಯೊಬ್ಬರು ಧಾರ್ಮಿಕ ಸ್ಥಳಗಳಲ್ಲಿ ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದ ಅಹವಾಲುಗಳನ್ನು ನಿಭಾಯಿಸಿದ ರೀತಿ ಬಗ್ಗೆ ಕಳೆದ ಎಪ್ರಿಲ್‌ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಪೀಠ, ಅಂತಹ ದೂರುಗಳನ್ನು ನಿರ್ವಹಿಸುವಾಗ ಪೋಸ್ಟ್ಮ್ಯಾನ್ ರೀತಿ ವರ್ತಿಸುತ್ತದೆ ಎಂದಿತ್ತು. ಘಟನೆಗೆ ಸಂಬಂಧಿಸಿದಂತೆ ಹಿರಿಯ ಪರಿಸರ ಅಧಿಕಾರಿಯ ಪಾತ್ರ ಪರಿಶೀಲಿಸಿ ಈ ನಿಟ್ಟಿನಲ್ಲಿ ಪ್ರಮಾಣ ಪತ್ರ ಸಲ್ಲಿಸುವಂತೆ ಮಂಡಳಿಯ ಅಧ್ಯಕ್ಷರಿಗೆ ಪೀಠ ಸೂಚಿಸಿತ್ತು. ಆದರೆ, ಅಧ್ಯಕ್ಷರು ಇನ್ನೂ ಪ್ರಮಾಣ ಪತ್ರ ಸಲ್ಲಿಸಿಲ್ಲ ಎಂಬುದನ್ನು ಗಮನಿಸಿದ ನ್ಯಾಯಪೀಠ ಬಳಿಕ ಪ್ರಮಾಣ ಪತ್ರ ಸಲ್ಲಿಸಲು ಅಧ್ಯಕ್ಷರಿಗೆ ಇನ್ನೂ ಎರಡು ವಾರಗಳ ಕಾಲಾವಕಾಶ ನೀಡಿತ್ತು. ಅದನ್ನು ಉಲ್ಲಂಘಿಸಿದರೆ ಸಿವಿಲ್ ಮಾನನಷ್ಟ ಮೊಕದ್ದಮೆ ಎದುರಿಸಬೇಕಾದೀತು ಎಂದು ಎಚ್ಚರಿಸಿ, ವಿಚಾರಣೆಯನ್ನು ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X