ಜು.5ಕ್ಕೆ ಎಲ್ಲಾ ಗ್ರಾಪಂಗಳಲ್ಲಿ ‘ಜಾಬ್ ಕಾರ್ಡ್’ ಮೇಳ
ಉಡುಪಿ, ಜು.3: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಜುಲೈ 5ರಂದು ಬೆಳಗ್ಗೆ 10 ಗಂಟೆಯಿಂದ ಜಾಬ್ ಕಾರ್ಡ್(ಉದ್ಯೋಗ ಚೀಟಿ) ಮೇಳ ನಡೆಯಲಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಹಾಗೂ ಎಲ್ಲಾ ಫಲಾನುಭವಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ. ನವೀನ್ ಭಟ್ ವೈ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





