ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಉಡುಪಿ, ಜು.3: ಪ್ರಸಕ್ತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. 50 ರೂ. ಹೆಚ್ಚುವರಿ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿದೆ.
ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ. ಮನಿಯಾರ್ಡರ್ ಮಾಡಿದರೆ ಅಂಚೆ ಮೂಲಕ ಅಥವಾ ವೆಬ್‌ಸೈಟ್ ಮೂಲಕ ಸಹ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ದೂರವಾಣಿ ಸಂಖ್ಯೆ: 080-26623584 ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





