Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾರುಕಟ್ಟೆಯ ಬೆಲೆಯ ಶೇ.25ರ ದರದಲ್ಲಿ...

ಮಾರುಕಟ್ಟೆಯ ಬೆಲೆಯ ಶೇ.25ರ ದರದಲ್ಲಿ ಹೆಣ್ಣು ಕರುಗಳ ವಿತರಣೆ: ಸಚಿವ ಪ್ರಭು ಚೌಹಾಣ್

ವಾರ್ತಾಭಾರತಿವಾರ್ತಾಭಾರತಿ3 July 2021 9:23 PM IST
share
ಮಾರುಕಟ್ಟೆಯ ಬೆಲೆಯ ಶೇ.25ರ ದರದಲ್ಲಿ ಹೆಣ್ಣು ಕರುಗಳ ವಿತರಣೆ: ಸಚಿವ ಪ್ರಭು ಚೌಹಾಣ್

ಬೆಂಗಳೂರು, ಜು. 3: `ರಾಜ್ಯದಲ್ಲಿ ದೇಶಿ ತಳಿಗಳ ವಂಶಾವಳಿಯನ್ನು ಹೆಚ್ಚಿಸುವಲ್ಲಿ ಪಶುಸಂಗೋಪನಾ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ `ಅಮೃತ ಸಿರಿ' ಯೋಜನೆ ಅಡಿಯಲ್ಲಿ ವೀರಮರಣ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ಉತ್ಕೃಷ್ಟ ತಳಿಯ ಕರುಗಳನ್ನು ನೀಡಲು ಇಲಾಖೆಯಿಂದ ಆದೇಶ ಮಾಡಲಾಗಿದೆ' ಎಂದು ಪಶುಸಂಗೋಪನ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. 

ಶನಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, `ಪಶುಸಂಗೋಪನಾ ಇಲಾಖೆಯ ತಳಿ ಸಂವರ್ಧನಾ ಕೇಂದ್ರಗಳಲ್ಲಿ ಹುಟ್ಟುವ ಕರುಗಳಲ್ಲಿ ಶೇ.50ರಷ್ಟು ಹೆಣ್ಣು ಕರುಗಳಿದ್ದು ಸಂವರ್ಧನೆಗೆ ಅಗತ್ಯ ಪ್ರಮಾಣದ ಕರುಗಳನ್ನಿಟ್ಟುಕೊಂಡು ಉಳಿದ ಹೆಣ್ಣು ಕರುಗಳನ್ನು ಮಾರುಕಟ್ಟೆ ದರದ ಶೇ.25 ಪ್ರತಿಶತ ದರದಲ್ಲಿ ನೀಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಸದ್ಯ ಹಳ್ಳಿಕಾರ್, ಅಮೃತ್ ಮಹಲ್, ಮಲೆನಾಡಗಿಡ್ಡ, ಖಿಲಾರಿ, ಕೃಷ್ಣವ್ಯಾಲಿ ತಳಿಗಳನ್ನು ವೀರಮರಣ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ನೀಡಲು ಕ್ರಮವಹಿಸಲಾಗಿದೆ. ದೇಶಿ ತಳಿಗಳ ವಂಶಾಭಿವೃದ್ಧಿ ಹೆಚ್ಚಿಸುವ ಉದ್ದೇಶ ಇದರಿಂದ ಈಡೇರಿದಂತಾಗುವುದಲ್ಲದೆ ಹಸುಗಳನ್ನು ಸಾಕುವುದರಿಂದ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಬದಲಾಗುವುದರಲ್ಲಿ ಯಾವ ಸಂಶಯವಿಲ್ಲ' ಎಂದು ಹೇಳಿದ್ದಾರೆ.

ಆಯ್ಕೆ ವಿಧಾನ: `ರಾಜ್ಯದಲ್ಲಿ ಸುಮಾರು 19 ತಳಿ ಸಂವರ್ಧನಾ ಕೇಂದ್ರಗಳಿದ್ದು ಈ ವ್ಯಾಪ್ತಿಯ ಜಿಲ್ಲೆಗಳಲ್ಲಿ 927ಕ್ಕೂ ಹೆಚ್ಚು ಹೆಣ್ಣು ಕರುಗಳನ್ನು ನೀಡಲಾಗುವುದು. ತಾಲೂಕು ಜಾನುವಾರು ವಿತರಣಾ ಸಮಿತಿಯಿಂದ ಆಯ್ಕೆ ಪ್ರಕ್ರಿಯೆ ನಡೆಯುವುದು ಅದರಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, ದೇವದಾಸಿಯರಿಗೆ, ಶವಸಂಸ್ಕಾರ ಕಾರ್ಮಿಕರಿಗೆ ಹಾಗೂ ವಿಧವೆಯರಿಗೆ ಮೊದಲ ಆದ್ಯತೆ ನೀಡಲಾಗುವುದು' ಎಂದು ಅವರು ಮಾಹಿತಿ ನೀಡಿದ್ದಾರೆ.

`ಕೋವಿಡ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವವರಿಗೆ ತಮ್ಮ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ `ಅಮೃತ ಸಿರಿ ಯೋಜನೆ' ಸಹಕಾರಿಯಾಗಲಿದ್ದು ದೇಶಿ ತಳಿಗಳ ಸಂಖ್ಯೆಯೂ ರಾಜ್ಯದಲ್ಲಿ ವೃದ್ಧಿಯಾಗಲು ಪಶುಸಂಗೋಪನೆ ಇಲಾಖೆಯ ಪ್ರಸ್ತುತ ಕ್ರಮ ಅನುಕೂಲಕರವಾಗಲಿದೆ. ಸಾರ್ವಜನಿಕರು ಅಪರೂಪದ ತಳಿಗಳ ಕರುಗಳ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X