Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜದ ಬೆಳವಣಿಗೆಯಲ್ಲಿ ಮಾಧ್ಯಮಗಳ...

ಸಮಾಜದ ಬೆಳವಣಿಗೆಯಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ತರ-ಎಸ್.ಅಂಗಾರ

ಸುಳ್ಯದಲ್ಲಿ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ3 July 2021 10:06 PM IST
share
ಸಮಾಜದ ಬೆಳವಣಿಗೆಯಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ತರ-ಎಸ್.ಅಂಗಾರ

ಸುಳ್ಯ : ಸಮಾಜದಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ತರವಾಗಿದೆ. ಪ್ರತಿಯೊಂದು ಮಾಧ್ಯಮಗಳು ಕೂಡ ನಿಸ್ಪಕ್ಷವಾಗಿ ಮತ್ತು ಸ್ಪಷ್ಟವಾಗಿ ವರದಿ ಮಾಡಿದರೆ ಅಂತಹ ವರದಿಗಳಿಗೆ ಮಹತ್ವ ಬರುತ್ತದೆ. ಇಂತಹ ವರದಿಗಳು ಜನರ ವಿಶ್ವಾಸ ಗಳಿಸುತ್ತದೆ. ಜನಪರವಾದ ವರದಿಗಾರಿಕೆಯಿಂದ ಮಾಧ್ಯಮ ಕ್ಷೇತ್ರ ಇನ್ನಷ್ಟು ವಿಸ್ತಾರವಾಗಿ ಮತ್ತು ಪರಿಣಾಮಕಾರಿಯಾಗಿ ಬೆಳೆಯಲು ಸಾಧ್ಯ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ  ಹೇಳಿದರು.

ಅವರು ಸುಳ್ಯ ತಾಲೂಕು ಪಂ. ವತಿಯಿಂದ ಕೊಡಮಾಡಿದ ಅಂಬೆಟಡ್ಕದ ನಿವೇಶನದಲ್ಲಿ ಶನಿವಾರ ನೂತನ ಪ್ರೆಸ್ ಕ್ಲಬ್ ಕಟ್ಟಡ ಮತ್ತು ಪತ್ರಕರ್ತರ ಸಮುದಾಯ ಭವನಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ನಿವೇಶನ ನೀಡಲು ಸಹಕರಿಸಿದ

ತಾ.ಪಂ.ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್ ರಾವ್ ಅವರಿಗೆ ಕೃತಜ್ಞತೆ ಸಲ್ಲಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸುಳ್ಯ ನಗರ ಪಂಚಾಯಿತಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ,  ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಗುತ್ತಿಗೆದಾರ ನಾರಾಯಣ ಕೇಕಡ್ಕ, ನ್ಯಾಯವಾದಿ ದಿನೇಶ್ ಮಡಪ್ಪಾಡಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ಪಿ. ಜಾನಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೃಷ್ಣ ಬೆಟ್ಟ, ಜರ್ನಲಿಸ್ಟ್ ಯೂನಿಯನ್ ತಾಲೂಕು ಅಧ್ಯಕ್ಷ ಉಮೇಶ್ ಮಣಿಕ್ಕಾರ, ನಾಗರಾಜ ಮೇಸ್ತ್ರಿ, ನ.ಪಂ. ಮಾಜಿ ಸದಸ್ಯ ಕೆ.ಎಂ. ಮುಸ್ತಫ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ರಂಗಕರ್ಮಿ ಜೀವನ್ ರಾಂ ಸುಳ್ಯ, ಉಜ್ವಲ್ ಯು.ಜೆ., ಪ್ರಸನ್ಮ, ಬೂಡು ರಾಧಾಕೃಷ್ಣ ರೈ,ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಶಂಕರ ಪೆರಾಜೆ, ಕೇಶವ ಸಿ.ಎ., ವೆಂಕಟ್ರಮಣ ಮುಳ್ಯ, ಆನಂದ ರಾವ್ ಕಾಂತಮಂಗಲ,  ಮೊದಲಾದವರಿದ್ದರು. ಪುರೋಹಿತ ನಾಗರಾಜ್ ಭಟ್  ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.  ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಖಜಾಂಜಿ ಯಶ್ವಿತ್ ಕಾಳಮ್ಮನೆ ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ರೇಣುಕಾಪ್ರಸಾದ್ ರಿಂದ 50 ಸಾವಿರ ರೂ. ಚೆಕ್ ಹಸ್ತಾಂತರ

ಪ್ರೆಸ್ ಕ್ಲಬ್ ಮತ್ತು ಪತ್ರಕರ್ತರ ಸಮುದಾಯ ಭವನ ನಿರ್ಮಾಣಕ್ಕೆ ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯ ದರ್ಶಿ ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು 50 ಸಾವಿರ ರೂಗಳ ಚೆಕ್ ಹಸ್ತಾಂತರ ಮಾಡಿದರು. ಪತ್ರಕರ್ತರ ಭವನ ನಿರ್ಮಾಣಕ್ಕೆ ಪೂರ್ಣ ಸಹಕಾರ ನೀಡಲಾಗುವುದು. ಪ್ರಥಮ ಹಂತದಲ್ಲಿ 50 ಸಾವಿರ ರೂ. ನೀಡುತ್ತಿದ್ದೇನೆ ಎಂದು ಡಾ.ರೇಣುಕಾ ಪ್ರಸಾದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X