ವಿಟ್ಲ -ಕಾಡುಮಠ: ಯುವಕನಿಗೆ ತಂಡದಿಂದ ಚೂರಿ ಇರಿತ

ಬಂಟ್ವಾಳ, ಜು.4: ತಾಲೂಕಿನ ಕೊಳ್ನಾಡು ಗ್ರಾಮದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಮಠ ಎಂಬಲ್ಲಿ ರವಿವಾರ ಯುವಕನೋರ್ವನಿಗೆ ತಂಡವೊಂದು ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ವರದಿಯಾಗಿದೆ.
ಹಲ್ಲೆ ಮತ್ತು ಚೂರಿ ಇರಿತದಿಂದ ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹಾರಿಸ್(29) ಗಾಯಗೊಂಡಿದ್ದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಹಲ್ಲೆ ನಡೆಸಿದ ತಂಡದಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರಿಸ್ ದೂರು ನೀಡಿದ್ದಾರೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





