Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗದ್ದೆಗೆ ಇಳಿದು ಉಳುಮೆ ಮಾಡಿದ ಪುತ್ತೂರು...

ಗದ್ದೆಗೆ ಇಳಿದು ಉಳುಮೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ವಾರ್ತಾಭಾರತಿವಾರ್ತಾಭಾರತಿ4 July 2021 5:55 PM IST
share
ಗದ್ದೆಗೆ ಇಳಿದು ಉಳುಮೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಪುತ್ತೂರು: ಭತ್ತದ ಬೇಸಾಯಕ್ಕೆ ಪ್ರೇರಣೆ ನೀಡುತ್ತಿರುವ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ರವಿವಾರ ಸ್ವತಃ ಗದ್ದೆಗೆ ಇಳಿದು ನೇಗಿಲು ಹಿಡಿದು ಉಳುಮೆ ಮಾಡಿದರು.

ಪುತ್ತೂರು ತಾಲೂಕಿನ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದಲ್ಲಿರುವ ಗದ್ದೆಯಲ್ಲಿ ಶಾಸಕರು ಉಳುಮೆ ನಡೆಸಿದರು.

ಶಾಸಕ ಸಂಜೀವ ಮಠಂದೂರು ಅವರು ಉಟ್ಟಿದ್ದ ಪಂಚೆಯನ್ನು ಎತ್ತಿಕಟ್ಟಿ, ಗದ್ದೆಗೆ ಇಳಿದು, ಎತ್ತುಗಳನ್ನು ಕಟ್ಟಿದ್ದ ನೇಗಿಲನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆ, ಉಳುಮೆ ಮಾಡುತ್ತಿದ್ದ ಬೇಸಾಯಗಾರರು ಉತ್ಸಾಹಗೊಂಡರು.

ಪುತ್ತೂರು ಕೆಲ ದಿನಗಳ ಹಿಂದೆ ಟ್ರಾಕ್ಟರ್ ಚಲಾಯಿಸಿ ಗದ್ದೆ ಉಳುಮೆಗೆ ಚಾಲನೆ ನೀಡಿ ಗಮನ ಸೆಳೆದಿದ್ದ ಶಾಸಕ ಸಂಜೀವ ಮಠಂದೂರು, ಇದೀಗ ನೇಗಿಲು ಹಿಡಿದು ಎತ್ತುಗಳ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಗದ್ದೆ ಉಳುಮೆ ಮಾಡಿದ್ದಾರೆ.

ಆರ್ಯಾಪು ಗ್ರಾಮದ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಹಾಗೂ ಸಂಪ್ಯ ನವಚೇತನಾ ಯುವಕ ಮಂಡಲದ ಸಹಭಾಗಿತ್ವದಲ್ಲಿ   ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ದಿ. ಉಗ್ಗಪ್ಪ ಗೌಡ ಅವರ ಹಡೀಲು ಬಿದ್ದ ಗದ್ದೆಯಲ್ಲಿ `ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ನಡೆಯಿತು.

ಅಭಿಯಾನ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು ಸ್ವತಃ ತಾವೇ ಗದ್ದೆಗೆ ಇಳಿದು ನೇಗಿಲ ಹಿಡಿದು ಎತ್ತುಗಳನ್ನು  ಸಾಂಪ್ರದಾಯಿಕ ಶೈಲಿಯಲ್ಲಿ ಉಳುಮೆ ಮಾಡುವ ಮೂಲಕ ಚಾಲನೆ ನೀಡಿದರು. ಇವರ ಜೊತೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಮಹಾವೀರ ಆಸ್ಪತ್ರೆಯ ಡಾ.ಸುರೇಶ್ ನೇಗಿಲ ಹಿಡಿದು ಸಾಂಪ್ರಾದಾಯಿಕ ಉಳುಮೆ ಮಾಡಿದರು. ಊರಿನ ಹಿರಿಯರಾದ ಗುಡ್ಡಪ್ಪ ಗೌಡ ಬೈಲಾಡಿಯವರು, ಗದ್ದೆ ಬೇಸಾಯದ ಸಂದರ್ಭದಲ್ಲಿ ಹಾಡುವ ಸಂಧಿ(ಹಾಡು)ನ್ನು ಹಾಡುವ ಮೂಲಕ ಎಲ್ಲರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಕಳೆದ ಸುಮಾರು 40 ವರ್ಷಗಳಿಂದ ಸ್ವತಃ ತಾನೇ ಸಾಂಪ್ರದಾಯಿಕ ಶೈಲಿಯಲ್ಲಿ ಉಳುಮೆ ಮಾಡಿ ಬೇಸಾಯ ಮಾಡುತ್ತಿರುವ ಎಪ್ಪತ್ತು ವರ್ಷದ ಬಾರಿಕೆ ಪರಮೇಶ್ವರ ನಾಯ್ಕ ಅವರನ್ನು ಸನ್ಮಾನಿಸಲಾಯಿತು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಜಯಕುಮಾರ್ ನಾಯರ್, ಪ್ರೇಮಾ ಸಪಲ್ಯ, ವಿನ್ಯಾಸ್ ಗೌಡ, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್‌, ಆರ್ಯಾಪು ಗ್ರಾ.ಪಂ ಅಧ್ಯಕ್ಷೆ ಸರಸ್ವತಿ, ಉಪಾದ್ಯಕ್ಷೆ ಪೂರ್ಣಿಮಾ, ಉದ್ಯಮಿ ಶಿವರಾಮ ಆಳ್ವ, ಗದ್ದೆ ಮಾಲಕಿ ಚಂದ್ರಾವತಿ ಉಗ್ಗಪ್ಪ ಗೌಡ, ಸಂಪ್ಯ ನವಚೇತನ ಯುವಕ ಮಂಡಲ ಅಧ್ಯಕ್ಷ ವಿಜಯ ಬಿ.ಎಸ್., ಹರಿಣಿ ಪುತ್ತೂರಾಯ ಸೇರಿದಂತೆ ಹಲವು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X