Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಜು.2ರಿಂದ ಜು.19ರವರೆಗೆ...

ಚಿಕ್ಕಮಗಳೂರು: ಜು.2ರಿಂದ ಜು.19ರವರೆಗೆ ಲಾಕ್‌ಡೌನ್ ನಿರ್ಬಂಧಗಳಲ್ಲಿ ಸಡಿಲಿಕೆ

ಬೆಳಗ್ಗೆ 6ರಿಂದ ಸಂಜೆ 5ರವರೆಗೆ ವ್ಯಾಪಾರ, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ4 July 2021 6:30 PM IST
share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್-೧೯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಜು.೫ರಿಂದ ೧೯ರವರೆಗೆ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜು.೫ ಸೋಮವಾರದಿಂದ ಜು.೧೯ರವರೆಗೆ ಬೆಳಗ್ಗೆ ೬ರಿಂದ ಸಂಜೆ ೫ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳೂ ಸೇರಿದಂತೆ ಎಲ್ಲ ರೀತಿಯ ವ್ಯಾಪಾರ ಚಟುವಟಿಕೆಗಳನ್ನು ಆರಂಭಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಟ್ಟಿದೆ.

ಜು.೫ರಿಂದ ೧೯ರವರೆಗೆ ಬೆಳಗ್ಗೆ ೬ರಿಂದ ಸಂಜೆ ೫ರವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳು ಮತ್ತು ವಾಣಿಜ್ಯ ಮಳಿಗೆಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು, ವ್ಯಾಪಾರಿಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಚಿತ್ರಮಂದಿರಗಳು, ಸಿನಿಮಾ ಹಾಲ್, ಪಬ್‌ಗಳ ಕಾರ್ಯಾರಂಭವನ್ನು ನಿರ್ಬಂಧಿಸಿದ್ದು, ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸೇರಿದಂತೆ ಇತರ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನಿರ್ಬಂಧಿಸಲಾಗಿದೆ. ಶೈಕ್ಷಣಿಕ ಸಂಸ್ಥೆಗಳು, ಟುಟೋರಿಯಲ್‌ಗಳು ಕಾಲೇಜುಗಳನ್ನು ಮುಂದಿನ ಆದೇಶದವರೆಗೂ ತೆರೆಯುವುದನ್ನು ನಿರ್ಬಂಧಿಸಲಾಗಿದೆ. ಈಜುಕೊಳಗಳಲ್ಲಿ ಸ್ಪರ್ಧಾತ್ಮಕ ಉದ್ದೇಶಕ್ಕಾಗಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತೆರೆಯಲು ಅವಕಾಶ ನೀಡಲಾಗಿದೆ. ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾಂಗಣಗಳನ್ನು ಕ್ರೀಡಾಪಟುಗಳ ಕ್ರೀಡಾಭ್ಯಾಸಕ್ಕೆ ಮಾತ್ರ ಅನುಮತಿಸಲಾಗಿದೆ. ಪ್ರೇಕ್ಷಕರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಸನ ಸಾಮರ್ಧ್ಯದವರೆಗೆ ಸಾರ್ವಜನಿಕ ಸಾರಿಗೆ ಸಂಚರಿಸಲು ಅನುಮತಿಸಲಾಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿರುವ ಜಿಲ್ಲಾಧಿಕಾರಿ ಜಿಲ್ಲಾದ್ಯಂತ ಪ್ರತಿದಿನ ರಾತ್ರಿ ೯ಗಂಟೆಯಿಂದ ಬೆಳಗ್ಗೆ ೫ಗಂಟೆಯವರೆಗೂ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿನಾಕಾರಣ ಜನ ಹಾಗೂ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಆದರೆ ರೋಗಿಗಳು ಮತ್ತು ಅವರ ಪರಿಚಾರಕರು ತುರ್ತು ಸಂದರ್ಭಗಳಲ್ಲಿ ಓಡಾಡಲು ಅವಕಾಶ ನೀಡಲಾಗಿದೆ. 

ರಾತ್ರಿ ವೇಳೆ ಕಾರ್ಯನಿರ್ವಹಿಸುವ ಕೈಗಾರಿಕೆಗಳು, ಕಂಪೆನಿಗಳು, ಸಂಸ್ಥೆಗಳು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಸಂಚರಿಸುವ ವೇಳೆ ಗುರುತಿನ ಚೀಟಿ ತೋರಿಸುವುದು ಕಡ್ಡಾಯವಾಗಿದೆ. ದೂರವಾಣಿ ಮತ್ತು ಅಂತರ್ಜಾಲ ಸೇವಾ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಸಂಸ್ಥೆಯಿಂದ ಪಡೆದಿರುವ ಗುರುತಿನ ಚೀಟಿಯನ್ನು ತೋರಿಸಿ ಸಂಚರಿಸಬಹುದಾಗಿದೆ. ಈ ಸಂಸ್ಥೆಗಳು ಅಗತ್ಯ ಸಿಬ್ಬಂದಿಯನ್ನು ಮಾತ್ರ ಬಳಸಿಕೊಳ್ಳಬೇಕು. ಉಳಿದ ಸಿಬ್ಬಂದಿ ಮನೆಯಿಂದ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೆಡಿಕಲ್, ಫಾರ್ಮಸಿ ತುರ್ತು ಅಗತ್ಯ ಸೇವೆಗಳಿಗೆ ಸಂಪೂರ್ಣ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಎಲ್ಲಾ ರೀತಿಯ ಸರುಕು ಸಾಗಣೆ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಹೋಗುವ ಖಾಸಗಿ ವಾಹನ ಮತ್ತು ಟ್ಯಾಕ್ಸಿಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಟಿಕೆಟ್‌ಗಳನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿರುವ ಅವರು, ಈ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.


ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ೧೦೦ ಜನರು ಭಾಗವಹಿಸಲು ಅನುಮತಿ ನೀಡಲಾಗಿದೆ. ಶವ ಸಂಸ್ಕಾರ ಕಾರ್ಯದಲ್ಲಿ ೨೦ ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸಾರ್ವಜನಿಕರ ಪ್ರವೇಶ, ದೇವರ ದರ್ಶನ, ಪೂಜೆ, ಪ್ರಾರ್ಥನೆ ಮತ್ತು ಆರಥಿ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದೊಡ್ಡ ದೇವಸ್ಥಾನಗಳಲ್ಲಿ ೧೦೦ ಮಂದಿ ಹಾಗೂ ಸಣ್ಣ ದೇವಸ್ಥಾನ ಪ್ರಾರ್ಥನಾ ಮಂದಿರಗಳಲ್ಲಿ ೨೦ ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X