ಮಡಿಕೇರಿ: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಜು.4 : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಪೂಜೆಕಲ್ಲು ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಹನ್ನೆರಡು ವರ್ಷದ ಗಂಡಾನೆಯೊಂದರ ಮೃತದೇಹ ಪತ್ತೆಯಾಗಿದೆ.
ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡು ಬಿಟ್ಟು ಕಾದಾಟ ನಡೆಸಿದ ಪರಿಣಾಮ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ತಿತಿಮತಿ ವಲಯದ ಎಸ್ ಎಫ್ ಐ ಉತ್ತಪ್ಪ, ಶ್ರೀಮಂಗಲ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ವೀರೇಂದ್ರ, ಉಪವಲಯ ಅರಣ್ಯಾಧಿಕಾರಿ ಬೋಪಣ್ಣ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story





