Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆ: ಜು.5ರಿಂದ ಖಾಸಗಿ-ಸರಕಾರಿ...

ದ.ಕ.ಜಿಲ್ಲೆ: ಜು.5ರಿಂದ ಖಾಸಗಿ-ಸರಕಾರಿ ಬಸ್ ಎಂದಿನಂತೆ ಓಡಾಟ

ವಾರ್ತಾಭಾರತಿವಾರ್ತಾಭಾರತಿ4 July 2021 10:09 PM IST
share

ಮಂಗಳೂರು, ಜೂ.4: ಕೋವಿಡ್ ಎರಡನೇ ಅಲೆ ತಡೆಗಟ್ಟಲು ಹೇರಿದ್ದ ನಿರ್ಬಂಧಗಳ ಪೈಕಿ ಬಹುತೇಕ ತೆರವುಗೊಳಿಸಿದ ಮೇರೆಗೆ ದ.ಕ.ಜಿಲ್ಲೆಯಲ್ಲೂ ಜು.5ರಿಂದ 19ರವರೆಗೆ ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಖಾಸಗಿ ಮತ್ತು ಸರಕಾರಿ ಬಸ್‌ಗಳು ಎಂದಿನಂತೆ ಓಡಾಟ ನಡೆಸಲಿದೆ. ಆದರೆ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖಗೊಳ್ಳದ ಕಾರಣ ಕೊಡಗು ಜಿಲ್ಲೆಗೆ ಸರಕಾರಿ ಬಸ್‌ಗಳು ತೆರಳುತ್ತಿಲ್ಲ. ಉಳಿದಂತೆ ಎಲ್ಲಾ ಜಿಲ್ಲೆಗಳಿಗೂ ಸರಕಾರಿ ಬಸ್‌ಗಳು ಆರಂಭಿಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಎಸ್ಸಾರ್ಟಿಸಿ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಈಗಾಗಲೇ ಬೆಂಗಳೂರಿಗೆ ರಾತ್ರಿ ಬಸ್ ಸಂಚಾರ ಆರಂಭ ಗೊಂಡಿದೆ. ಕಳೆದ ಎರಡು ದಿನಗಳಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ತಲಾ ನಾಲ್ಕೈದು ಬಸ್‌ಗಳು ಬೆಂಗಳೂರಿಗೆ ಸಂಚಾರ ಆರಂಭಿಸಿವೆ.

ರವಿವಾರ ಕೂಡ ಎರಡೂ ವಿಭಾಗದಿಂದ ಸರಕಾರಿ ಬಸ್‌ಗಳು ಬೆಂಗಳೂರಿಗೆ ತೆರಳಿವೆ. ಅಲ್ಲದೆ ಕೊಡಗು ಜಿಲ್ಲಾಡಳಿತ ಅನುಮತಿ ನಿರಾಕರಿಸಿದ ಕಾರಣ ಮೈಸೂರು, ಮಂಡ್ಯ ಮಾರ್ಗದಲ್ಲಿ ಬಸ್ ಸಂಚರಿಸಿಲ್ಲ.

ಈ ಮಧ್ಯೆ ಹಾಸನ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದ ಕಾರಣ ಅಲ್ಲಿನ ಜಿಲ್ಲಾಡಳಿತ ಕೂಡ ರಾತ್ರಿ ಸಂಚಾರಕ್ಕೆ ಅನುಮತಿ ನಿರಾಕರಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆದರೆ ಪ್ರಯಾಣಿಕರ ಹಿತದೃಷ್ಟಿಯಿಂದ ರಾತ್ರಿ ನೇರ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸುವಂತೆ ಕೆಎಸ್ಸಾರ್ಟಿಸಿ ಘಟಕಗಳು ಮನವಿ ಮಾಡಿವೆ.

ಖಾಸಗಿ ಬಸ್‌ಗಳ ಕೊನೆಯ ಟ್ರಿಪ್ ಕಡಿತ?

ಸರಕಾರದ ಅನ್‌ಲಾಕ್ ಆದೇಶದಲ್ಲಿ ರಾತ್ರಿ 9 ಗಂಟೆವರೆಗೆ ಬಸ್ ಓಡಿಸಲು ಅನುಮತಿಸಲಾಗಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ರಾತ್ರಿ 9ರ ಒಳಗೆ ಬಸ್ ಸಂಚಾರ ನಿಲುಗಡೆಯಾಗಬೇಕು. ಹಾಗಾಗಿ ಕೊನೆಯ ಟ್ರಿಪ್‌ನ್ನು ಕಡಿತಗೊಳಿಸುವ ಸಾಧ್ಯತೆ ಇದೆ.

ಈ ಬಗ್ಗೆ ‘ವಾರ್ತಾಭಾರತಿ’ಯೊಂದಿಗೆ ಮಾತನಾಡಿದ ದ.ಕ. ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ, ರಾಜ್ಯ ಸರಕಾರದ ಪರಿಷ್ಕೃತ ಆದೇಶದಲ್ಲಿ ರಾತ್ರಿ 9 ಗಂಟೆವರೆಗೆ ಬಸ್ ಓಡಿಸಲು ಅನುಮತಿಸಲಾಗಿದೆ. ಜಿಲ್ಲೆಯಲ್ಲಿ ರಾತ್ರಿ 9ರ ಒಳಗಾಗಿ ಬಸ್ ಸಂಚಾರ ನಿಲುಗಡೆಯಾಗಬೇಕು. ಹಾಗಾಗಿ ಕೊನೆಯ ಟ್ರಿಪ್‌ನ್ನು ಕಡಿತ ಮಾಡುವ ಅಗತ್ಯವಿದೆ ಎಂದು ಹೇಳಿದರು.

ದ.ಕ.ಜಿಲ್ಲೆಯಲ್ಲಿ ಸೋಮವಾರ 80ರಿಂದ 100ರಷ್ಟು ಖಾಸಗಿ ಬಸ್‌ಗಳು ಸಂಚರಿಸುವ ಸಾಧ್ಯತೆ ಇದೆ. ಪ್ರಯಾಣಿಕರ ಸಂಖ್ಯೆಯನ್ನು ಅವಲಂಬಿಸಿ ಬಸ್‌ಗಳು ಓಡಾಟ ಮಾಡಲಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X