ದ.ಕ. ಜಿಲ್ಲೆ : ಕೋವಿಡ್ಗೆ 12 ಬಲಿ; 265 ಮಂದಿಗೆ ಕೊರೋನ ಪಾಸಿಟಿವ್
![ದ.ಕ. ಜಿಲ್ಲೆ : ಕೋವಿಡ್ಗೆ 12 ಬಲಿ; 265 ಮಂದಿಗೆ ಕೊರೋನ ಪಾಸಿಟಿವ್ ದ.ಕ. ಜಿಲ್ಲೆ : ಕೋವಿಡ್ಗೆ 12 ಬಲಿ; 265 ಮಂದಿಗೆ ಕೊರೋನ ಪಾಸಿಟಿವ್](https://www.varthabharati.in/sites/default/files/images/articles/2021/07/5/297571-1625493819.jpg)
ಮಂಗಳೂರು, ಜು.5: ದ.ಕ.ಜಿಲ್ಲೆಯಲ್ಲಿ ಸೋಮವಾರ ಕೋವಿಡ್ ಸಾವು ಮತ್ತು ಸೋಂಕಿತರ ಸಂಖ್ಯೆ ಹಾಗೂ ಕೋವಿಡ್ ಪಾಸಿಟಿವಿಟಿ ಪ್ರಮಾಣದಲ್ಲಿ ತುಸು ಏರಿಕೆ ಕಂಡು ಬಂದಿದೆ.
ಸೋಮವಾರ ಕೋವಿಡ್ಗೆ 12 ಮಂದಿ ಬಲಿಯಾಗಿದ್ದರೆ, 265 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೆ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.1.74ರಿಂದ 3.45ಕ್ಕೇರಿದೆ.
ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,255ಕ್ಕೇರಿದ್ದರೆ, ಕೊರೋನ ಸೋಂಕಿಗೊಳಗಾದವರ ಸಂಖ್ಯೆ 94,072ಕ್ಕೇರಿದೆ. ಅಲ್ಲದೆ ಸೋಮವಾರ 427 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 89,572ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 3,245 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರೆಗೆ 10,85,162 ಮಂದಿಯ ಗಂಟಲಿನ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 9,91,090 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಪ್ರಕಟನೆ ತಿಳಿಸಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 78,394 ಮಂದಿಯಿಂದ 95,52,417 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ನ ಒಂದು ಪ್ರಕರಣ ಪತ್ತೆ
ದ.ಕ.ಜಿಲ್ಲೆಯಲ್ಲಿ ಸೋಮವಾರ ಬ್ಲ್ಯಾಕ್ ಫಂಗಸ್ ನ 1 ಪ್ರಕರಣ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಈ ವ್ಯಕ್ತಿ ಮಂಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 30ಕ್ಕೇರಿದೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 23 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ.
ಈವರೆಗೆ 36 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅಲ್ಲದೆ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 16 ಮಂದಿಯ ಸಹಿತ 21 ಮಂದಿ ಬ್ಲ್ಯಾಕ್ ಫಂಗಸ್ ಗೆ ಬಲಿಯಾಗಿದ್ದಾರೆ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.