ಬೆಂಗಳೂರು: 110 ಕೆಜಿ ಗಾಂಜಾ ಜಪ್ತಿ, ಇಬ್ಬರ ಬಂಧನ
ಬೆಂಗಳೂರು, ಜು.5: ಮಾದಕ ವಸ್ತು ಗಾಂಜಾ ಮಾರಾಟ ಆರೋಪ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಅನ್ನಪೂರ್ಣೇಶ್ವರಿನಗರ ಠಾಣಾ ಪೊಲೀಸರು, 110 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಕಾರಿನಲ್ಲಿ ಗಾಂಜಾ ಮೂಟೆಗಳನ್ನು ದೇವನಹಳ್ಳಿ ಕಡೆಯಿಂದ ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಮಾರ್ಗವಾಗಿ ಉಲ್ಲಾಳದ ಕಡೆಗೆ ಸಾಗಿಸುತ್ತಿದ್ದ ಕುರಿತು ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಡಿಸಿಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದರು.
ಬಂಧಿತರು ಹಲವು ದಿನಗಳಿಂದ ಬೇರೆ ಕಡೆಯಿಂದ ಗಾಂಜಾ ಖರೀದಿಸಿಕೊಂಡು ನಗರದ ವಿವಿಧ ಕಡೆಗಳಲ್ಲಿ ಗಿರಾಕಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಗಿರಾಕಿಯೊಬ್ಬ ನೀಡಿದ ಮಾಹಿತಿಯನ್ನು ಆಧರಿಸಿ ಖಚಿತವಾದ ಮಾಹಿತಿಯನ್ನು ಆಧರಿಸಿ ಅನ್ನಪೂರ್ಣೇಶ್ವರಿನಗರ ಪೊಲೀಸರು ಆರೋಪಿಗಳನ್ನು ವಶಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.
Next Story





