ಅಪ್ರಾಪ್ತೆಯ ಅತ್ಯಾಚಾರ ಆರೋಪ: ಓರ್ವನ ಸೆರೆ

ಬೆಂಗಳೂರು, ಜು.5: ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಪ್ರಕರಣ ಸಂಬಂಧ ಹನುಮಂತನಗರ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಹನುಮಂತನಗರ ನಿವಾಸಿ ದರ್ಶನ್ ಎಂಬಾತ ಬಂಧಿತ ಆರೋಪಿಯಾಗಿದ್ದು ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
ಶ್ರೀನಿವಾಸನಗರದ ಅಪ್ರಾಪ್ತೆ ಬಾಲಕಿಯನ್ನು ಆನ್‍ಲೈನ್‍ನಲ್ಲಿ ಪರಿಚಯಗೊಂಡ ಆರೋಪಿಯೂ ಆಕೆಯನ್ನು ಪ್ರೀತಿಸುವುದಾಗಿ ನಂಬಿಸಿ ಜೂ.9ರಂದು ವಿಜಯನಗರದ ಗೆಳೆಯನ ಮನೆಗೆ ಆಕೆಯನ್ನು ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ತಿಳಿದುಬಂದಿದೆ.
ಬಾಲಕಿ ಹತ್ತಿರದ ಔಷಧೀಯ ಮಳಿಗೆಗೆ ಹೋಗುತ್ತೇನೆ ಎಂದಿದ್ದವಳು ಮನೆಗೆ ಬಂದಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story





