ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಒಬ್ಬರ ಮೇಲೊಬ್ಬರು ಪೈಪೋಟಿ: ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

ಬಾಗಲಕೋಟೆ, ಜು. 5: `ಪ್ರತಿಪಕ್ಷ ಕಾಂಗ್ರೆಸ್‍ನವರು ಮದುವೆಗಿಂತ ಮೊದಲೇ ಮಕ್ಕಳ ಹೆರಬೇಕೆಂದು ಹೇಳುತ್ತಾರೆ' ಎಂದು ಆ ಪಕ್ಷದಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚೆಗೆ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಲೇವಡಿ ಮಾಡಿದ್ದಾರೆ.
ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಚುನಾವಣೆ ಇಲ್ಲ. ಯಾವುದೇ ಚುನಾವಣೆಯ ದಿನಾಂಕವೂ ನಿಗದಿ ಆಗಿಲ್ಲ. ಈ ಸಮಯದಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತು ಕಿತ್ತಾಟ ಆಡುವುದು ಸರಿಯಲ್ಲ. ಚುನಾವಣೆ ಬಳಿಕ ಯಾವ ಪಕ್ಷಕ್ಕೆ ಬರುತ್ತದೆ. ಆ ಪಕ್ಷದ ಶಾಸಕರೆಲ್ಲರೂ ಸೇರಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡುತ್ತಾರೆ' ಎಂದು ಪ್ರತಿಕ್ರಿಯೆ ನೀಡಿದರು.
`ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷ ಅವಧಿ ಇದೆ. ಚುನಾವಣೆಯಲ್ಲಿ 113 ಸೀಟುಗಳನ್ನು ಗೆಲ್ಲಬೇಕು. ಆ ಬಳಿಕ ಮುಖ್ಯಮಂತ್ರಿ ಆಯ್ಕೆ ಸಂಬಂಧ ಚರ್ಚೆ ಆಗಬೇಕು. ಆದರೆ, ಇದೀಗ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚಿಸುವುದು ಅಪ್ತಸ್ತುತ ಎಂದ ಗೋವಿಂದ ಕಾರಜೋಳ, ಬಹುಮತ ಬಂದ ಮೇಲೆ, ಸಿಎಂ ಯಾರು ಎಂದು ನಿರ್ಧಾರ ಆಗುತ್ತದೆ. ಅದು ಅವರ ಪಕ್ಷಕ್ಕೆ ಬಿಟ್ಟದ್ದು' ಎಂದು ತಿಳಿಸಿದರು.
`ಚುನಾವಣೆಗೆ ಇನ್ನೂ ಎರಡು ವರ್ಷ ಇರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ನಾಲ್ಕೈದು ಗುಂಪುಗಳಾಗಿ ಸಿಎಂ ಸ್ಥಾನಕ್ಕಾಗಿ ಹೋರಾಟ, ಹೊಡೆದಾಟ ನಡೆಸುವುದು ಸರಿಯಲ್ಲ. ಮಾಡುದ್ದಾರೆ. ಇದು ಕಾಂಗ್ರೆಸ್ ಪಕ್ಷದ ಅವಸಾನದ ಮುನ್ಸೂಚನೆ' ಎಂದು ಗೋವಿಂದ ಕಾರಜೋಳ ಇದೇ ವೇಳೆ ಎಚ್ಚರಿಕೆ ನೀಡಿದರು.





