ಕೆಆರ್ ಎಸ್ ಗಟ್ಟಿಮುಟ್ಟಾಗಿದೆ: ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ

ಮಡಿಕೇರಿ ಜು.6 : ಸರ್ ಎಂ.ವಿಶ್ವೇಶ್ವರಯ್ಯನವರು ಕಟ್ಟಿದ ಕೆಆರ್‍ಎಸ್ ಗಟ್ಟಿಮುಟ್ಟಾಗಿದೆ, ಜಲಾಶಯಕ್ಕೆ ಯಾವುದೇ ತೊಂದರೆಯಾಗಿಲ್ಲ, ತಜ್ಞರು ವರದಿ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾರೂ ಆತಂಕ ಪಡುವ ಅಗತ್ಯವಿಲ್ಲ, ಸಂಸದರೇ ಇರಲಿ, ಶಾಸಕರೇ ಇರಲಿ ವೈಜ್ಞಾನಿಕ ವರದಿಯ ಆಧಾರದಲ್ಲಿ ಹೇಳಿಕೆ ನೀಡಬೇಕೆ ಹೊರತು ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದರು. ಈಗಾಗಲೇ ತಜ್ಞರು ಕೆಆರ್ಎಸ್ ಬಗ್ಗೆ ವರದಿ ನೀಡಿದ್ದು, ಯಾವುದೇ ಹಾನಿಯಾಗಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟಪಡಿಸಿಯಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ನಡುವಿನ ವಾರ್ ಲೋಕಸಭಾ ಚುನಾವಣೆಗೂ ಮೊದಲೇ ಆರಂಭವಾಗಿದೆ. ಇದು ಹೀಗೆ ಮುಂದುವರೆಯಲಿದೆ ಎಂದು ಅಶೋಕ್ ಹೇಳಿದರು.
Next Story





