ವಿಂಬಲ್ಡನ್ ಮಹಿಳಾ ಸಿಂಗಲ್ಸ್: 41 ವರ್ಷಗಳ ಬಳಿಕ ಫೈನಲ್ ತಲುಪಿದ ಆಸ್ಟ್ರೇಲಿಯದ ಮೊದಲ ಆಟಗಾರ್ತಿ ಆ್ಯಶ್ಲೆ ಬಾರ್ಟಿ
ಪ್ರಶಸ್ತಿ ಸುತ್ತಿನಲ್ಲಿ ಪ್ಲಿಸ್ಕೋವಾ ಎದುರಾಳಿ

ಆ್ಯಶ್ಲೆ ಬಾರ್ಟಿ, photo: AP
ಲಂಡನ್, ಜು.8: ಅಗ್ರ ಶ್ರೇಯಾಂಕದ ಆ್ಯಶ್ಲೆ ಬಾರ್ಟಿ ಮಾಜಿ ಚಾಂಪಿಯನ್ ಆ್ಯಂಜೆಲಿಕ್ ಕೆರ್ಬರ್ ಅವರನ್ನು 6-3, 7-6(3) ಸೆಟ್ ಗಳ ಅಂತರದಿಂದ ಮಣಿಸಿದರು. ಈ ಮೂಲಕ 41 ವರ್ಷಗಳ ಬಳಿಕ ವಿಂಬಲ್ಡನ್ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ ಆಸ್ಟ್ರೇಲಿಯದ ಮೊದಲ ಆಟಗಾರ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಬಾರ್ಟಿ ಶನಿವಾರ ನಡೆಯಲಿರುವ ಮಹಿಳೆಯರ ಸಿಂಗಲ್ಸ್ ಫೈನಲ್ ನಲ್ಲಿ ಕರೊಲಿನಾ ಪ್ಲಿಸ್ಕೋವಾ ರನ್ನು ಎದುರಿಸಲಿದ್ದಾರೆ. ಝೆಕ್ ಆಟಗಾರ್ತಿ ಪ್ಲಿಸ್ಕೋವಾ ಗುರುವಾರ ನಡೆದ ಮತ್ತೊಂದು ಮಹಿಳೆಯರ ಸಿಂಗಲ್ಸ್ ಸೆಮಿ ಫೈನಲ್ ನಲ್ಲಿ ದ್ವಿತೀಯ ಶ್ರೇಯಾಂಕದ ಬೆಲಾರಸ್ ಆಟಗಾರ್ತಿ ಅರ್ಯನಾ ಸಬಲೆಂಕಾರನ್ನು 5-7, 6-4, 6-4 ಸೆಟ್ ಗಳ ಅಂತರದಿಂದ ಮಣಿಸಿ ಮೊದಲ ಬಾರಿ ಫೈನಲ್ ತಲುಪಿದರು.
Next Story





