ಯೋಗೀಶ್ ಗೌಡ ಕೊಲೆ ಆರೋಪ ಪ್ರಕರಣ: ಕೆಎಎಸ್ ಅಧಿಕಾರಿ ಸಿಬಿಐ ಬಲೆಗೆ
ಬೆಂಗಳೂರು, ಜು.8: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಆರೋಪ ಪ್ರಕರಣ ಸಂಬಂಧ ಕೆಎಎಸ್ ಅಧಿಕಾರಿವೊರ್ವರನ್ನು ಸಿಬಿಐ ತನಿಖಾಧಿಕಾರಗಳು ಗುರುವಾರ ಬಂಧಿಸಿದ್ದಾರೆ.
ಗದಗ ಎಪಿಎಂಸಿ ಕಾರ್ಯದರ್ಶಿಯಾಗಿರುವ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರನ್ನು ಬಂಧಿಸಲಾಗಿದೆ.
ಗುರುವಾರ ಮುಂಜಾನೆ ಸ್ವಗೃಹದಲ್ಲೇ ನ್ಯಾಮಗೌಡ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು, ಆರೋಗ್ಯ ತಪಾಸಣೆ ಮತ್ತು ಕೋವಿಡ್ ಪರೀಕ್ಷೆ ನಡೆಸಿ, ನ್ಯಾಯಾಲಯದ ಅನುಮತಿ ಪಡೆದು ಬಂಧಿಸಿದರು ಎಂದು ವರದಿಯಾಗಿದೆ.
ಈಗಾಗಲೇ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಗಣಿ ಮತ್ತು ಭೂವಿಜ್ಞಾನ ಸಚಿವರಾಗಿದ್ದ ಅವಧಿಯಲ್ಲಿ ಸೋಮು ನ್ಯಾಮಗೌಡ ಅವರು ಆಪ್ತ ಕಾರ್ಯದರ್ಶಿಯಾಗಿದ್ದರು. ಕೊಲೆಗೆ ಪರೋಕ್ಷವಾಗಿ ನೆರವಾಗಿರುವ ಆಪಾದನೆ ಈ ಅಧಿಕಾರಿ ಮೇಲಿದೆ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಸೋಮು ಅವರನ್ನು ಸಿಬಿಐ ಅಧಿಕಾರಿಗಳು ಹಲವು ಬಾರಿ ವಿಚಾರಣೆ ನಡೆಸಿದ್ದರು.
Next Story





