ನಿಯಮಗಳಿಗೆ ತಿದ್ದುಪಡಿ ತರಲು ರಮೇಶ್ ಬಾಬು ಆಗ್ರಹ
ಬೆಂಗಳೂರು, ಜು. 8: `ವಿಧಾನ ಪರಿಷತ್ತಿನಲ್ಲಿ ಕಿಯೋನಿಕ್ಸ್ ಮುಖಾಂತರ ನೇಮಕ ಆಗಿರುವ ಗುತ್ತಿಗೆ ಆಧಾರದ ಮತ್ತು ಇತರೆ ತಾತ್ಕಾಲಿಕ ಸಿಬ್ಬಂದಿಗೆ ನಿಯಮ ಮೀರಿ ಹೆಚ್ಚುವರಿ ವೇತನ ಪಾವತಿ ಮಾಡಿದ್ದು ಸರಕಾರಕ್ಕೆ 48 ಲಕ್ಷ ರೂ.ಗಳಷ್ಟು ನಷ್ಟ ಉಂಟಾಗಿದ್ದು, ಈ ನೇಮಕದಲ್ಲಿ ಅಕ್ರಮ, ಸ್ವಜನಪಕ್ಷಪಾತ ನಡೆದಿದೆ' ಎಂದು ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.
ಗುರುವಾರ ಈ ಸಂಬಂಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು, ಈ ಸಂಬಂಧ ಸಚಿವಾಲಯದ ಅಧಿಕಾರಿಗಳು ನೆಪ ಮಾತ್ರಕ್ಕೆ ತನಿಖೆ ನಡೆಸಿ ವರದಿಯ ಮೂಲಕ ವ್ಯವಸ್ಥಿತವಾಗಿ ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ. ಆ ಮೂಲಕ ಸಾರ್ವಜನಿಕ ಹಣವನ್ನು ಪೋಲು ಮಾಡಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಬಗ್ಗೆ ತನಿಖೆ ಅಗತ್ಯವಿದೆ. ಅಲ್ಲದೆ, ನೇಮಕದ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಮಂಡಳಿ ಮುಂದೆ ಮಂಡಿಸಿ ನಿಯಾಮವಳಿಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ್ದಾರೆ.
Next Story





