ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ: ತನಿಖೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜು. 9: `ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಇವರ ಅನಾರೋಗ್ಯವನ್ನೂ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ, ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಫೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಆಗ್ರಹಿಸಿದ್ದಾರೆ.
ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಅವರನ್ನು ಠಾಣಾಧಿಕಾರಿ ಹಲ್ಲೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಹಲ್ಲೆಯಿಂದ ಆತ ತೀವ್ರ ಅಸ್ವಸ್ಥನಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದ. ಈ ಘಟನೆಯ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಘಟನೆಯ ಬಗ್ಗೆ ತನಿಖೆಗೆ ಒತ್ತಾಯಿಸಿದ್ದಾರೆ.
ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ.
— Siddaramaiah (@siddaramaiah) July 9, 2021
ಇವರ ಅನಾರೋಗ್ಯವನ್ನೂ ಲೆಕ್ಕಿಸದೆ,
ಹಳೆ ಸುಳ್ಳು ಕೇಸ್ ಆಧರಿಸಿ,
ಪೊಲೀಸರು ದೌರ್ಜನ್ಯ ನಡೆಸಿದ್ದಾರೆ.
ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು.@DgpKarnataka pic.twitter.com/8zjPtLu3Lm







