Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ...

ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿಸಿದ್ದು ಸತ್ಯ: ಸಂಸದೆ ಸುಮಲತಾ ಆರೋಪ

ವಾರ್ತಾಭಾರತಿವಾರ್ತಾಭಾರತಿ9 July 2021 6:20 PM IST
share
ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿಸಿದ್ದು ಸತ್ಯ: ಸಂಸದೆ ಸುಮಲತಾ ಆರೋಪ

ಬೆಂಗಳೂರು, ಜು. 9: `ಕೀಳು ಮಟ್ಟದ ರಾಜಕೀಯಕ್ಕೆ ಅಂಬರೀಶ್ ಹೆಸರನ್ನು ಬಳಸಿಕೊಳ್ಳಬಾರದು' ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಇಬ್ಬರ ನಡುವಿನ ವಾಕ್ಸಮರ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ಅಂಬರೀಶ್ ಸ್ಮಾರಕಕ್ಕೆ ಒಪ್ಪಿಗೆ ಪಡೆಯಲು ನಟರಾದ ದೊಡ್ಡಣ್ಣ ಮತ್ತು ಶಿವರಾಂ ಅವರು ಅಂದಿನ ಸಿಎಂ ಎಚ್‍ಡಿಕೆ ಬಳಿ ಹೋದಾಗ ಅವರ ಮುಖಕ್ಕೆ ಪತ್ರ ಎಸೆದು ಅಪಮಾನ ಮಾಡಿದ್ದರು. ಅಂಬರೀಶ್ ಏನು ಸಾಧನೆ ಮಾಡಿದ್ದಾರೆಂದು ಸ್ಮಾರಕ ಮಾಡಬೇಕು ಎಂದಿದ್ದೂ ಅಲ್ಲದೆ, ಹಿರಿಯ ನಟರನ್ನು ಅಪಮಾನ ಮಾಡಿ ಕಣ್ಣೀರಿಡುವಂತೆ ಮಾಡಿದ್ದರು' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಬರೀಶ್ ಬಗ್ಗೆ ಮಾತನಾಡಲು ಯೋಗತ್ಯೆ ಇಲ್ಲದವರು ಮಾತನಾಡುತ್ತಿದ್ದಾರೆ. ಅಂಬರೀಶ್ ಅಕ್ರಮ ಮಾಡಿದ್ದರೆ ದೂರು ನೀಡಲಿ. ಅಧಿಕಾರದಲ್ಲಿ ಇದ್ದಾಗ ಏಕೆ ಸುಮ್ಮನಿದ್ದಿರಿ. ಈ ಬಗ್ಗೆ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ ಸುಮಲತಾ, `ಅಂಬರೀಶ್ ಸ್ಮಾರಕಕ್ಕೆ ಅನುಮೋದನೆ ನೀಡಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಹೊರತು ಬೇರೆ ಯಾರೂ ಅಲ್ಲ' ಎಂದು ತಿಳಿಸಿದರು.

ಕುಮಾರಸ್ವಾಮಿ ದೂರವಾಣಿ ಕದ್ದಾಲಿಕೆ ಮಾಡಿಸಿದ್ದು ಸತ್ಯ. ಸಿಬಿಐ ಅಧಿಕಾರಿಗಳು ಎರಡು ಬಾರಿ ನನ್ನ ಬಳಿ ಮಾಹಿತಿ ಪಡೆದುಕೊಂಡು ಹೋಗಿದ್ದಾರೆ. ಆದಿಚುಂಚನಗಿರಿ ಮಠದ ಸ್ವಾಮೀಜಿಯವರ ಕರೆಗಳನ್ನೂ ಕದ್ದಾಲಿಸಲಾಗಿತ್ತು. ತಾವು ದೂರವಾಣಿ ಕದ್ದಾಲಿಕೆ ಮಾಡಿಸಿಲ್ಲ ಎಂದು ಎಚ್‍ಡಿಕೆ ಹೇಳಿದ್ದಾರೆ. ಕಳ್ಳ ಎಂದಿಗೂ ತಾನು ಕಳ್ಳತನ ಮಾಡಿದ್ದೇನೆಂದು ಒಪ್ಪಿಕೊಳ್ಳುವುದಿಲ್ಲ ಎಂದು ಸುಮಲತಾ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಕುಮಾರಸ್ವಾಮಿ ಏಕೆ ಇಷ್ಟು ತಲೆ ಕೆಡಿಸಿಕೊಂಡಿದ್ದಾರೆ? ಅವರಿಗೆ ಸಂಬಂಧವಿಲ್ಲದ ವಿಚಾರವಾದರೆ ಏಕೆ ಅವರಿಗೆ ಆತಂಕ? ಸದ್ಯದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ, ಗಣಿ ಮತ್ತು ಭೂ ವಿಜ್ಞಾನ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಮಾಹಿತಿ ನೀಡುತ್ತೇನೆ ಎಂದು ಸಂಸದೆ ಸುಮಲತಾ ಇದೇ ವೇಳೆ ಎಚ್ಚರಿಕೆ ನೀಡಿದರು.

ಅಂಬರೀಶ್ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಎಚ್‍ಡಿಕೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನನ್ನ ಮತ್ತು ಸುಮಲತಾ ಮಧ್ಯೆ ಅಪಾರ್ಥ ಕಲ್ಪಿಸಿ, ಪ್ರಚಾರಕ್ಕೆ ವಿಫಲಯತ್ನ ನಡೆಸಿದ್ದರು. ಆ ಸಂದರ್ಭದಲ್ಲಿ ಹೊಟೇಲ್‍ನಲ್ಲಿ ಇಬ್ಬರು ನಡೆದುಕೊಂಡು ಹೋಗುವ ಸಿಸಿ ಕ್ಯಾಮೆರಾ ದೃಶ್ಯವನ್ನು ಪಡೆದು ಅದನ್ನು ತಿರುಚಿ ಅಪಪ್ರಚಾರ ಮಾಡಲು ಪಿತೂರಿ ಮಾಡಿದ್ದರು. ಅಂಬರೀಶ್ ಅವರು ಇಲ್ಲ ಎಂದು ಕುಮಾರಸ್ವಾಮಿ ಇದೀಗ ಧ್ವನಿ ಎತ್ತರಿಸುವುದು ಬೇಡ.

-ರಾಕ್‍ಲೈನ್ ವೆಂಕಟೇಶ್ ಚಿತ್ರ ನಿರ್ಮಾಪಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X