Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ; ಕಾರ್ಯಕರ್ತನ ಮೇಲೆ ಹಲ್ಲೆ...

ಕಾರ್ಕಳ; ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಎಸ್‌ಐ ಅಮಾನತಿಗೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 July 2021 6:29 PM IST
share
ಕಾರ್ಕಳ; ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ: ಎಸ್‌ಐ ಅಮಾನತಿಗೆ ಕಾಂಗ್ರೆಸ್ ಆಗ್ರಹ

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವ ಕಾರ್ಕಳ ನಗರ ಠಾಣೆ ಎಸ್‌ಐ ಅವರನ್ನು ಅಮಾನತು ಮಾಡುವಂತೆ ಕಾಂಗ್ರೆಸ್ ಆಗ್ರಹಿಸಿದೆ.

ಕಾರ್ಕಳದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ ಅಧಿಕಾರಿಗಳು ಬಿಜೆಪಿ ಪಕ್ಷದ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ, ನ್ಯಾಯಯುತವಾಗಿ ಕಾರ್ಯನಿರ್ವಸಬೇಕು ತಪ್ಪಿದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಬೇಕಾಗಬಹುದು ಎಂದರು.

ಕಾರ್ಕಳ ಯುವ ಕಾಂಗ್ರೇಸ್ ಅಧ್ಯಕ್ಷ ಯೋಗಿಶ್ ಇನ್ನಾ ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಹಿರ್ಗಾನರವರ ಮೇಲೆ ಸುಳ್ಳು ಆರೋಪ ಮಾಡಿ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಮಾಡಿರುವುದು ಖಂಡನೀಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ದೌರ್ಜನ್ಯ ಮಾಡಿರುವ ಠಾಣಾಧಿಕಾರಿಯನ್ನು ವಜಾ ಮಾಡಬೇಕು, ಅಲ್ಲದೆ  ರಾಧಾಕೃಷ್ಣ ನಾಯಕ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ತೇಜೋವಧೆ ಮಾಡಿರುವ ವ್ಯಕ್ತಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಲ್ಲದೆ ತನ್ನ ಹೇಸರಿನಲ್ಲಿ ನಕಲಿ ಖಾತೆ ತೆರೆದ ಬಗ್ಗೆ ರಾಧಾಕೃಷ್ಣ ನಾಯಕ್ ಬೆಂಗಳೂರಿನ ಗಂಗಮನ ಗುಡಿ ಠಾಣೆಯಲ್ಲಿ ಸೆಪ್ಟೆಂಬರ್ ನಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಆಗಿಲ್ಲ ಎಂದು ಹೇಳಿದರು.

ರಾಧಾಕೃಷ್ಣ ನಾಯಕ್ ತಪ್ಪು ಮಾಡಿದ್ದರೆ ಸಂವಿಧಾನ ಪ್ರಕಾರ ಕಾನೂನು ಕ್ರಮ ಕೈಗೊಳ್ಳವ ಬದಲು ಹೃದಯ ರೋಗಿಯಾಗಿರುವ ರಾಧಾಕೃಷ್ಣ ನಾಯಕ್‌ರ ಎದೆಗೆ ಒದ್ದು ಹಲ್ಲೆ ಮಾಡಿರುವುದು ಬಿಜೆಪಿಯವರನ್ನು ಮೆಚ್ಚಿಸುವ ಕಾರ್ಯವೇ ಎಂದು ಪ್ರಶ್ನಿಸಿದ್ದಾರೆ.

ತುಳು ಸಂಸ್ಕೃತಿಯ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ

ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಿಲ್ಲಾ ಭೇಟಿ ಸಂದರ್ಭ ನೀಡಿರುವ ಉಡುಗೋರೆಯ ಮೇಲೆ ಬಿಜೆಪಿಯವರು ತುಳುನಾಡಿನ ಸಂಸ್ಕೃತಿಗೆ ಅವಮಾನ ಅಂತ ಬಿಂಬಿಸುತ್ತಿರುವುದು ರಾಜಕೀಯ ಪ್ರೇರಿತ. ಇದು ಕೇವಲ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿಯವರ ಗಿಮಿಕ್ ಆಗಿದೆ ಎಂದು ಮಂಜುನಾಥ ಪೂಜಾರಿ ಹೇಳಿದರು.

ಕಾಂಗ್ರೆಸ್ ಮುಖಂಡರಿಗೆ ಉಡುಗೊರೆ ನೀಡುವ ಸಂದರ್ಭ ಬಿಜೆಪಿಯವರಿಗೆ  ಧಾರ್ಮಿಕ ಸೂಕ್ಷಮತೆ ಕಂಡು ಬರುವುದು ಹೊಸತೇನಲ್ಲ, ಬಿಜೆಪಿಯವರು ಕೇವಲ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಕೋಮು ಗಲಭೆ ಸೃಷ್ಟಿ ಮಾಡಿ ರಾಜಕೀಯ ಮಾಡುವುದಾಗಿದೆ ಎಂದರು.

ತುಳು ನಾಡಿಗೆ ಚಿಕಮಗಳೂರಿನಿಂದ ವಲಸೆ ಬಂದ ಶಾಸಕ ಸುನಿಲ್ ಕುಮಾರ್‌ಗೆ ತುಳು ಸಂಸ್ಕೃತಿಯ ಮೇಲೆ ನಂಬಿಕೆ ಇಲ್ಲದೆ ಇರಬಹುದು, ತುಳು ನಾಡನ್ನು ಮಾತೃಭೂಮಿಯಾಗಿ ಆರಾಧಿಸುವ ಕಾಂಗ್ರೆಸ್ ಕಾರ್ಯಕರ್ತರು ತುಳು ಸಂಸ್ಕೃತಿಯ ಪಾಠ ಬಿಜೆಪಿಯವರಿಂದ ಕಲಿಯಬೇಕಿಲ ಎಂದರು.

ತುಳು ಸಂಸ್ಕೃತಿಯ ಬಗ್ಗೆ ಈಗ ಮಾತನಾಡುವ ಬಿಜೆಪಿಯವರು ಲಾಕ್‌ಡೌನ್ ಸಂದರ್ಭ ತುಳುನಾಡಿನ ಜನ ದೇಶ, ವಿದೇಶಗಳಲ್ಲಿ ಸಮಸ್ಯೆಗೆ ಸಿಲುಕಿದಾಗ ಎಷ್ಟು ಸ್ಪಂದಿಸಿದ್ದಾರೆ ಎಂದು ಪ್ರಶ್ನಿಸಿದರು.

ಈ ಸಂದರ್ಭ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ರಾಜ್ಯ ಯುವ ಕಾಂಗ್ರೇಸ್ ಮುಖಂಡ ರವಿಶಂಕರ್ ಸೇರಿಗಾರ್, ಕಿಸಾನ್ ಕಾಂಗ್ರೇಸ್  ಅಧ್ಯಕ್ಷ ಪ್ರಕಾಶ್ ಪೂಜಾರಿ ಕೆರ್ವಾಶೆ, ಪ್ರಭಾಕರ್ ಬಂಗೇರ ಉಪಸ್ಥಿತರಿದ್ದರು.

ಶುಭದ್ ರಾವ್ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X