Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್ಬುಕ್ ಬಿರುಕಿನ ಲಾಭವೆತ್ತುತ್ತಿದೆ,...

ಫೇಸ್ಬುಕ್ ಬಿರುಕಿನ ಲಾಭವೆತ್ತುತ್ತಿದೆ, ಕೇಂದ್ರ ಮತ್ತು ದಿಲ್ಲಿ ಸರಕಾರಗಳು ಜೊತೆಯಾಗಿ ಕೆಲಸ ಮಾಡಬೇಕು: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ9 July 2021 8:16 PM IST
share
ಫೇಸ್ಬುಕ್ ಬಿರುಕಿನ ಲಾಭವೆತ್ತುತ್ತಿದೆ, ಕೇಂದ್ರ ಮತ್ತು ದಿಲ್ಲಿ ಸರಕಾರಗಳು ಜೊತೆಯಾಗಿ ಕೆಲಸ ಮಾಡಬೇಕು: ಸುಪ್ರೀಂ

ಹೊಸದಿಲ್ಲಿ, ಜು.9: ಫೇಸ್ಬುಕ್ ಕೇಂದ್ರ ಮತ್ತು ದಿಲ್ಲಿ ಸರಕಾರಗಳ ನಡುವಿನ ರಾಜಕೀಯ ಕಚ್ಚಾಟಗಳು ಮತ್ತು ಕಾನೂನು ಸಮರದ ಲಾಭವನ್ನು ಪಡೆದುಕೊಳ್ಳುತ್ತಿದೆ ಎಂಬ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಕೇಂದ್ರ ಮತ್ತು ದಿಲ್ಲಿಯಲ್ಲಿ ಎರಡು ವಿಭಿನ್ನ ಸರಕಾರಗಳನ್ನು ಆಯ್ಕೆ ಮಾಡುವಲ್ಲಿ ಮತದಾರರು ಪ್ರದರ್ಶಿಸಿದ್ದ ಅದೇ ಪಕ್ವತೆಯೊಂದಿಗೆ ಉಭಯ ಸರಕಾರಗಳು ಜೊತೆಯಾಗಿ ಕೆಲಸ ಮಾಡಬೇಕಿದೆ ಎಂದು ಕಿವಿಮಾತನ್ನು ಹೇಳಿದೆ.

2020ರ ದಿಲ್ಲಿ ದಂಗೆಗಳ ಸಂದರ್ಭದಲ್ಲಿ ಜಾಲತಾಣ ವೇದಿಕೆಗಳ ಬಳಕೆಗೆ ಸಂಬಂಧಿಸಿದಂತೆ ಫೇಸ್ಬುಕ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳ ಅಧಿಕಾರಿಗಳನ್ನು ವಿಚಾರಣೆಗಾಗಿ ಕರೆಸುವ ದಿಲ್ಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿಯ ಹಕ್ಕನ್ನು ಗುರುವಾರ ಎತ್ತಿಹಿಡಿದ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ಸಮಿತಿಯ ಮುಂದೆ ಹಾಜರಾಗುವುದರಿಂದ ವಿನಾಯಿತಿ ಕೋರಿ ಫೇಸ್ಬುಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸುತ್ತಿದ್ದ ಸರ್ವೋಚ್ಚ ನ್ಯಾಯಾಲಯವು ದಿಲ್ಲಿ ಮತ್ತು ಕೇಂದ್ರದ ಮಟ್ಟಗಳಲ್ಲಿ ಪರಸ್ಪರ ಸಹಕಾರದ ಕೊರತೆಗಾಗಿ ಆಪ್ ಮತ್ತು ಬಿಜೆಪಿಯನ್ನೂ ತರಾಟೆಗೆತ್ತಿಕೊಂಡಿತು. ಉಭಯ ಸರಕಾರಗಳು ನಿರಂತರ ಕಾನೂನು ಸಮರದಲ್ಲಿರುವಂತೆ ಕಂಡು ಬರುತ್ತಿದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್,ದಿನೇಶ ಮಹೇಶ್ವರಿ ಮತ್ತು ಹೃಷಿಕೇಶ ರಾಯ್ ಅವರ ಪೀಠವು,ದುರದೃಷ್ಟವಶಾತ್ ಪರಸ್ಪರ ಮೇಲಾಟಕ್ಕೆ ಪೈಪೋಟಿಯ ಪ್ರಯತ್ನ ನಡೆಯುತ್ತಿದೆ. 

ವಿಶಾಲ ದೃಷ್ಟಿಕೋನವನ್ನು ಹೊಂದಲು ಉಭಯ ಸರಕಾರಗಳ ವೈಫಲ್ಯದಿಂದಾಗಿ ಪದೇ ಪದೇ ನ್ಯಾಯಾಂಗದ ಸಮಯವನ್ನು ವ್ಯರ್ಥ ಮಾಡುವ ಬದಲು ಪೂರ್ವಭಾವಿ ಚರ್ಚೆ ಮತ್ತು ಪರಸ್ಪರ ತಿಳುವಳಿಕೆ ಈ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸುತ್ತದೆ ಎಂದು ಹೇಳಿತು.


ಉಭಯ ಸರಕಾರಗಳ ನಡುವಿನ ಭಿನ್ನಾಭಿಪ್ರಾಯಗಳು ಮತ್ತು ಸಹಮತದ ಮಾರ್ಗವೊಂದನ್ನು ಕಂಡುಕೊಳ್ಳುವಲ್ಲಿ ಅವುಗಳ ಅಸಾಮರ್ಥ್ಯದ ಲಾಭವನ್ನೆತ್ತಲು ಅರ್ಜಿದಾರರು(ಫೇಸ್ಬುಕ್) ಹವಣಿಸುತ್ತಿದ್ದಾರೆ ಮತ್ತು ಇದೇ ಕಾರಣದಿಂದ ದಿಲ್ಲಿ ವಿಧಾನಸಭೆಯ ಸಮನ್ಸ್ ವಿರುದ್ಧ ನ್ಯಾಯಾಲಯದ ಮೆಟ್ಟಿಲನ್ನೇರಿದ್ದಾರೆ ಎಂದು ಹೇಳಿದ ಸರ್ವೋಚ್ಚ ನ್ಯಾಯಾಲಯವು, ಫೇಸ್ಬುಕ್ ವಿರುದ್ಧ ವಿಚಾರಣೆಯನ್ನು ಆರಂಭಿಸುವ ಮತ್ತು ಸಮನ್ಸ್ ಕಳುಹಿಸುವ ದಿಲ್ಲಿ ವಿಧಾನಸಭೆಯ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದಂತೆ ಪ್ರಕರಣದಲ್ಲಿಯ ವಾದವಿವಾದಗಳು ಸಮಸ್ಯೆಗಳನ್ನು ಸೃಷ್ಟಿಸಿವೆ. ಫೇಸ್ಬುಕ್ ಸರಕಾರದ ಪರ ಅಥವಾ ಬಲಪಂಥೀಯರ ಬಗ್ಗೆ ಒಲವು ಹೊಂದಿದೆ ಎಂದು ಪ್ರತಿವಾದಿ (ದಿಲ್ಲಿ) ಆರೋಪಿಸುವಂತೆ ಕಂಡು ಬರುತ್ತಿದ್ದರೆ ಇನ್ನೊಂದೆಡೆ ಕೇಂದ್ರ ಸರಕಾರವು ಅದಕ್ಕೆ ವಿರುದ್ಧವಾದುದನ್ನು ಹೇಳುತ್ತಿದೆ. ಇಲ್ಲಿ ಸಾಮಾನ್ಯ ಅಂಶವೆಂದರೆ ಅರ್ಜಿದಾರರ ವಿರುದ್ಧ ತಾರತಮ್ಯದ ಆರೋಪಗಳನ್ನು ಮಾಡುತ್ತ ಅವು ತಮ್ಮದೇ ಆದ ರಾಜಕೀಯ ಕಾರಣಗಳಿಗಾಗಿ ವಿಭಿನ್ನ ನಿಲುವುಗಳನ್ನು ಪ್ರದರ್ಶಿಸುತ್ತಿವೆ ಎಂದು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X