ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ವೇಳೆ ಭಕ್ತರಿಂದ ಕೋವಿಡ್ ನಿಯಮ ಉಲ್ಲಂಘನೆ: ಆರೋಪ

ಶಿವಮೊಗ್ಗ, ಜು.9: ಜಿಲ್ಲೆಯ ಶಕ್ತಿ ದೇವತೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಅಮವಾಸ್ಯೆ ಹಿನ್ನೆಲೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಬಹುತೇಕರು ಕೋವಿಡ್ ನಿಯಮ ಪಾಲಿಸದೆ ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಲಾಕ್ ಡೌನ್ ಇದ್ದ ಹಿನ್ನೆಲೆ ಸಿಗಂದೂರಿನಲ್ಲಿ ದೇಗುಲ ಬಂದ್ ಮಾಡಲಾಗಿತ್ತು. ಒಂದು ವಾರದಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಅಮಾವಾಸ್ಯೆ ಹಿನ್ನಲೆ ದೇವಸ್ಥಾನಕ್ಕೆ ಬಂದ ಬಹುತೇಕ ಭಕ್ತರು ಕೋವಿಡ್ ನಿಯಮವನ್ನು ಗಾಳಿಗೆ ತೂರಿದ್ದಾರೆ. ಮಾಸ್ಕ್ ಧರಿಸದೆ, ಸುರಕ್ಷಿತ ಅಂತರವನ್ನು ಕಾಪಾಡುತ್ತಿಲ್ಲ. ಇದು ಸ್ಥಳೀಯ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಮೂರನೇ ಅಲೆಯ ಭೀತಿಯ ನಡುವೆ ಪ್ರವಾಸಿಗರು ಕೋವಿಡ್ ನಿಯಮಗಳನ್ನು ಪಾಲಿಸದಿರುವುದು ಸ್ಥಳೀಯರ ಚಿಂತೆಗೀಡು ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲೂ ಆತಂಕ ವ್ಯಕ್ತಪಡಿಸಿದ್ದಾರೆ.
Next Story





