Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಶವಂತಪುರ-ಮಂಗಳೂರು ಹಗಲು ರೈಲು;...

ಯಶವಂತಪುರ-ಮಂಗಳೂರು ಹಗಲು ರೈಲು; ಜು.11ರಂದು ವಿಸ್ಟಾಡೋಮ್ ಬೋಗಿಯೊಂದಿಗೆ ಸಂಚಾರಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 July 2021 10:18 PM IST
share
ಯಶವಂತಪುರ-ಮಂಗಳೂರು ಹಗಲು ರೈಲು; ಜು.11ರಂದು ವಿಸ್ಟಾಡೋಮ್ ಬೋಗಿಯೊಂದಿಗೆ ಸಂಚಾರಕ್ಕೆ ಚಾಲನೆ

ಮಂಗಳೂರು, ಜು.9: ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್ ಈ ಸಂದರ್ಭ ಗಣ್ಯ ಉಪಸ್ಥಿತರಿರುವರು ಎಂದು ರೈಲ್ವೆ ಇಲಾಖೆಯ ಪ್ರಕಟನೆ ತಿಳಿಸಿದೆ.

ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆ ಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ ರೈಲು ಪ್ರಯಾಣಿಕರಿಗೆ ಪ್ರಕೃತಿಯ ರಮಣೀಯ ಸೌಂದರ್ಯ ವನ್ನು ಕಣ್ತುಂಬಿಸುವ ಅವಕಾಶವನ್ನು ನೀಡಲಿದೆ.

ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್‌ಗಳನ್ನು ಜೋಡಿಸಲಾಗುತ್ತದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯ ದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರಿಗೆ ಪ್ರಕೃತಿ ಸೊಬಗಿನ ದರ್ಶನವನ್ನು ನೀಡುತ್ತದೆ. ಕಳೆದ ಹಲವು ವರ್ಷ ಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರಂತೆ ವಿಸ್ಟಾಡೋಮ್ ರೈಲು ಸಂಚಾರ ಆರಂಭಿಸುತ್ತಿದೆ.

ಪಶ್ಚಿಮ ಘಟ್ಟದ ನಡುವೆ ಹಾದುಹೋಗುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟಿಯ ಸೌಂದರ್ಯವನ್ನು ರೈಲಿನೊಳಗೆ ಕುಳಿತು ಸವಿಯುವ ಭಾಗ್ಯ ಸಿಗಲಿದೆ. ಮಾರ್ಗ ಮಧ್ಯದಲ್ಲಿ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು. ಮಳೆಗಾಲದಲ್ಲೇ ಈ ಸಂಚಾರ ಆರಂಭಗೊಳ್ಳಲಿರುವ ಕಾರಣ ಪ್ರಕೃತಿಯ ಸೊಬಗು ಮತ್ತಷ್ಟು ರೋಮಾಂಚನ ಕಾರಿಯಾಗಲಿದೆ.

ವಿಸ್ಟಾಡೋಮ್ ಕೋಚ್ ಗಾಜಿನ ದೊಡ್ಡ ಚಾವಣಿ ಒಳಗೊಂಡಿದೆ. 180 ಡಿಗ್ರಿ ಕೋನದಲ್ಲಿ ಸುತ್ತುವ ಸುಖಾಸನಗಳು ಇರಲಿವೆ. ಜಿಪಿಎಸ್ ಆಧಾರಿತ ಮಾಹಿತಿ ವ್ಯವಸ್ಥೆ, ಮೈಕ್ರೊ ಓವನ್, ಪುಟ್ಟ ರೆಫ್ರಿಜರೇಟರ್‌ಗಳ ಸಹಿತ ಹಲವು ಸೌಲಭ್ಯಗಳನ್ನು ಹೊಂದಿದೆ. ಇದು ಪ್ರವಾಸಿಗರನ್ನು ಆಕರ್ಷಿಸುವಲ್ಲಿ ಈ ವಿಸ್ಟಾಡೋಮ್ ಬೋಗಿ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X