ಚಿಕ್ಕಮಗಳೂರು: ರಸ್ತೆ ಮದ್ಯೆಯೇ ಹೊತ್ತಿ ಉರಿದ ಕಾರು; ಚಾಲಕ ಸಜೀವ ದಹನ

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಅಲ್ಟೋ ಕಾರೊಂದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಇಂದು ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ವಾಸಿ ರಘು ಎಂದು ಗುರುತಿಸಲಾಗಿದೆ. ರಘು ಅವರು ಕಾಫಿ. ಟಿಂಬರ್ ವ್ಯಾಪಾರ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರಿಗೆ ಹೋಗಿ ಆಲ್ದೂರಿಗೆ ಬರುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಘಟನೆ ಬಳಿಕ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದ್ದು, ನಂತರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಕಾರಿನಲಿದ್ದ ಮೃತದೇಹವನ್ನು ಹೊರತೆಗೆದು ವಾಹನಗಳ ಓಡಾಟಕ್ಕೆ ಅನುಕೂಲ ಮಾಡಿಕೊಟ್ಟರು.
ಸ್ಥಳಕ್ಕೆ ಆಲ್ದೂರು ಪಿಎಸ್ಐ ಶಿವರುದ್ರಮ್ಮ ಹಾಗು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story







