Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮ ಮೇಲಿನ ಆರೋಪಗಳನ್ನು ಜನರ...

ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 July 2021 1:04 PM IST
share
ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ: ಕುಮಾರಸ್ವಾಮಿ

ಬೆಂಗಳೂರು, ಜು.10: 'ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಿಗೆ ಸಲಹೆ ಮಾಡಿದ್ದಾರೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಪ್ರಾದೇಶಿಕ ಪಕ್ಷವಾಗಿ ನಾವು ಮಾತನಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತನಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ತಿಳಿಸಿದ್ದಾರೆ.

'ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ' ಎಂದು ಅವರು ಹೇಳಿದ್ದಾರೆ.

'ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ.
4/4

— H D Kumaraswamy (@hd_kumaraswamy) July 10, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X