Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲ್ಯಾಣ ಕರ್ನಾಟಕ ಭಾಗಕ್ಕೆಇನ್ನಷ್ಟು...

ಕಲ್ಯಾಣ ಕರ್ನಾಟಕ ಭಾಗಕ್ಕೆಇನ್ನಷ್ಟು ಅನುದಾನ: ಸಿಎಂ ಯಡಿಯೂರಪ್ಪ ಭರವಸೆ

ಕಲಬುರಗಿಯಲ್ಲಿ ಲೋಕೋಪಯೋಗಿ ಭವನ ಉದ್ಘಾಟನೆ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ10 July 2021 2:24 PM IST
share
ಕಲ್ಯಾಣ ಕರ್ನಾಟಕ ಭಾಗಕ್ಕೆಇನ್ನಷ್ಟು ಅನುದಾನ: ಸಿಎಂ ಯಡಿಯೂರಪ್ಪ ಭರವಸೆ

ಕಲಬುರಗಿ, ಜು.10: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೋಸ್ಕರ ಕೆಕೆಆರ್ ಡಿಬಿ 1,500 ಕೋಟಿ ರೂ. ಅನುದಾನವಲ್ಲದೇ ಇನ್ನೂ  ಹೆಚ್ಚಿನ ಅನುದಾನ ನೀಡುವುದಕ್ಕೆ ಸರಕಾರ ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ 83 ಕೋಟಿ ವೆಚ್ಚದ ಲೋಕೋಪಯೋಗಿ ಭವನದ ಉದ್ಘಾಟನೆ ಹಾಗೂ ವಿವಿಧ  ಕಾಮಗಾರಿಗಳಿಗೆ ಶನಿವಾರ ಶಂಕು ಸ್ಥಾಪನೆಯನ್ನು ನೆರವೇರಿಸಿ ಮುಖ್ಯಮಂತ್ರಿ ಮಾತನಾಡುತ್ತಿದ್ದರು.

ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಗೆ ತೃಪ್ತಿ ಪಡದೇ ಈ ಭಾಗದ ವಿಶೇಷ ಅಭಿವೃದ್ಧಿಗೆ ಸರ್ಕಾರದಿಂದ ಸೂಕ್ತ ಅನುದಾನ ಒದಗಿಸಲಾಗುತ್ತಿದೆ, ಕೋವಿಡ್ ಸಂಕಷ್ಟದಲ್ಲೂ ಕಲ್ಯಾಣ  ಕರ್ನಾಟಕ  ಭಾಗದ ಅಭಿವೃದ್ಧಿ ಕುಂಠಿತಗೊಳ್ಳಬಾರದೆಂಬ ಆಶಯದಿಂದ 1,500 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಹಾಗೂ ಈ ಭಾಗದ ವಿಶೇಷ ಅಭಿವೃದ್ಧಿಗೆ ಡಾ.ನಂಜುಂಡಪ್ಪ ವರದಿ ಆಧರಿಸಿದಂತೆ ಕೃಷಿ, ಕೈಗಾರಿಕೆಗಳ ಪ್ರಗತಿ ಜೊತೆಗೆ ಜನರ ಅಭ್ಯುದಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ವೇದಿಕೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ್ ಸೇಡಂ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತಿಮಾ, ಡಾ.ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ, ಡಾ.ಸಾಯಿಬಣ್ಣ ತಳವಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಕಲಬುರಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಳಗೆ, ತೊಗರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಗುರುಬಸಪ್ಪ (ಅಪ್ಪು) ಕಣಕಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ  ಡಾ.ಎನ್.ವಿ.ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ್,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ ಶಶಿ, ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಿಮಿ ಮರಿಯಮ್ ಜಾರ್ಜ್, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಉಪಸ್ಥಿತರಿದ್ದರು.

ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X