Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸ್ವಚ್ಛ’ ಪ್ರಶಸ್ತಿ ಪುರಸ್ಕೃತ ಗುರುಪುರ...

‘ಸ್ವಚ್ಛ’ ಪ್ರಶಸ್ತಿ ಪುರಸ್ಕೃತ ಗುರುಪುರ ಗ್ರಾಪಂ ವ್ಯಾಪ್ತಿಯಲ್ಲಿ ತ್ಯಾಜ್ಯದ ರಾಶಿ !

ವಾರ್ತಾಭಾರತಿವಾರ್ತಾಭಾರತಿ10 July 2021 7:36 PM IST
share
‘ಸ್ವಚ್ಛ’ ಪ್ರಶಸ್ತಿ ಪುರಸ್ಕೃತ ಗುರುಪುರ ಗ್ರಾಪಂ ವ್ಯಾಪ್ತಿಯಲ್ಲಿ ತ್ಯಾಜ್ಯದ ರಾಶಿ !

ಮಂಗಳೂರು, ಜು.10: ಕೇವಲ ಒಂದು ವರ್ಷದ ಹಿಂದೆ ‘ಅಭಿವೃದ್ಧಿ ಮತ್ತು ಸ್ವಚ್ಛತೆ’ಗಾಗಿ ರಾಷ್ಟ್ರೀಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದ ಗುರುಪುರ ಗ್ರಾಪಂ ಇದೀಗ ತ್ಯಾಜ್ಯಮಯವಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

ತ್ಯಾಜ್ಯವನ್ನು ವಿಲೇ ಮಾಡುವ ಹೊಣೆ ಹೊತ್ತುಕೊಂಡಿದ್ದ ಗುತ್ತಿಗೆ ಸಂಸ್ಥೆಯ ಕಾಲಾವಧಿ ಮುಗಿದಿದುದೇ ಇದಕ್ಕೆ ಕಾರಣವಾಗಿದೆ. ಆದಾಗ್ಯೂ ಈ ಸಂಸ್ಥೆಯು ಕೊರೋನ ಭೀತಿಯ ಮಧ್ಯೆಯೂ ತ್ಯಾಜ್ಯ ವಿಲೇಮಾರಿ ಮಾಡಿ ಗಮನ ಸೆಳೆದಿತ್ತು. ಇದೀಗ ಕೊರೋನ ಹಿನ್ನಲೆಯಲ್ಲಿ ವಿಧಿಸಲಾಗಿದ್ದ ಲಾಕ್‌ ಡೌನ್ ತೆರೆಯಲಾಗಿದೆ. ‘ಬ್ರೈಟ್’ ಎಂಬ ಹೊಸ ಗುತ್ತಿಗೆ ಸಂಸ್ಥೆಗೆ ತ್ಯಾಜ್ಯ ನಿರ್ವಹಣೆಯ ಜವಾಬ್ದಾರಿ ನೀಡಲಾಗಿದ್ದು, ಅದಿನ್ನೂ ಕೆಲಸ ಕೈಗೆತ್ತಿಕೊಂಡಿಲ್ಲ. ಹಾಗಾಗಿ ಗ್ರಾಪಂ ವ್ಯಾಪ್ತಿಯ ಅಲ್ಲಲ್ಲಿ ತ್ಯಾಜ್ಯ ರಾಶಿ ಬಿದ್ದಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಗ್ರಾಪಂ ವ್ಯಾಪ್ತಿಯ ಮೂಳೂರು ಮತ್ತು ಅಡ್ಡೂರು ಗ್ರಾಮಗಳಲ್ಲಿ ಎರಡು ವಾರದಿಂದ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸಿಲ್ಲ ಎನ್ನಲಾಗಿದೆ. ಇದರಿಂದ ಜನರು ರಸ್ತೆ ಬದಿ ಮತ್ತು ಜನವಸತಿ ಇರುವ ಪ್ರದೇಶದ ಗುಡ್ಡಗಳ ಖಾಲಿ ಪ್ರದೇಶಗಳಲ್ಲಿ ತ್ಯಾಜ್ಯ ರಾಶಿರಾಶಿ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜಾನುವಾರು ಸಹಿತ ಇತರ ಪ್ರಾಣಿಪಕ್ಷಿಗಳು ತ್ಯಾಜ್ಯ ಎಳೆದಾಡಿ ಅಲ್ಲಲ್ಲಿ ಹರಡುತ್ತಿದ್ದರೆ ಹಸಿ ತ್ಯಾಜ್ಯವು ಮಳೆ ನೀರಿಗೆ ಮತ್ತಷ್ಟು ಕೊಳೆತು ನಾರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

‘ಗ್ರಾಪಂ ವ್ಯಾಪ್ತಿಯ ಅಲ್ಲಲ್ಲಿ ತ್ಯಾಜ್ಯ ರಾಶಿಬಿದ್ದಿರುವ ಬಗ್ಗೆ ಮಾಹಿತಿ ಬಂದಿದೆ. ಈಗಾಗಲೇ ತ್ಯಾಜ್ಯ ವಿಲೇವಾರಿಗೆ ಟೆಂಡರ್ ಕರೆಯಲಾಗಿದ್ದು, ಬ್ರೈಟ್ ಎಂಟರ್‌ ಪ್ರೈಸೆಸ್ ಸಂಸ್ಥೆಯು ಗುತ್ತಿಗೆ ಪಡೆದಿದೆ. ಶೀಘ್ರ ಈ ಸಂಸ್ಥೆ ಕಾರ್ಯಾರಂಭ ಮಾಡಲಿದೆ’ ಎಂದು ಪಿಡಿಒ ಅಬೂಬಕರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X