ಕೆ-ಸಿಇಟಿ ಪರೀಕ್ಷೆಗೆ ತರಬೇತಿ
ಉಡುಪಿ, ಜು.10: ರಾಜ್ಯ ಮುಕ್ತ ವಿಶ್ವದ್ಯಾನಿಲಯದ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್ಲೈನ್ ತರಬೇತಿಯನ್ನು ನೀಡಲು ನಿರ್ಧರಿಸ ಲಾಗಿದೆ.
ಆಸಕ್ತರು ಜುಲೈ 17ರೊಳಗೆ ರಾಜ್ಯ ಮುಕ್ತ ವಿಶ್ವದ್ಯಾನಿಲಯದ ಮುಕ್ತ ಗಂಗೋತ್ರಿ ಆವರಣದಲ್ಲಿರುವ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸುವಂತೆ ಮುಕ್ತ ವಿವಿ ಕುಲಸಚಿವ ಪ್ರೊ. ಆ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story