ಕಾರ್ಕಳ: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಜು. 12ರಿಂದ ಕಿಟ್ ವಿತರಣೆ
ಉಡುಪಿ, ಜು.10: ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್-19 ಎರಡನೇ ಅಲೆಯಿಂದ ಸಂಕಷ್ಟದಲ್ಲಿರುವ ಕಾರ್ಕಳ ತಾಲೂಕಿನ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಲಭ್ಯವಿರುವ 6000 ಆಹಾರ ಸಾಮಾಗ್ರಿ ಕಿಟ್‌ಗಳ ವಿತರಣಾ ಕಾರ್ಯಕ್ರಮ ಕಾರ್ಕಳ ಶಾಸಕರ ನೇತೃತ್ವದಲ್ಲಿ ನಡೆಯಲಿದೆ.
ಜುಲೈ 12ರಿಂದ 22ರವರೆಗೆ ಗ್ರಾಮ ಪಂಚಾಯತ್‌ವಾರು ಕಿಟ್‌ಗಳನ್ನು ವಿತರಿಸಲಿದ್ದು, ಅರ್ಹ ನೋಂದಾಯಿತ ಕಟ್ಟಡ ಕಾರ್ಮಿಕರು ನಿಗದಿಪಡಿಸಿದ ದಿನಾಂಕ, ಸಮಯ ಹಾಗೂ ಸ್ಥಳದಲ್ಲಿ ಕಾರ್ಮಿಕ ಇಲಾಖೆಯಿಂದ ನೀಡಿರುವ ಗುರುತಿನ ಚೀಟಿ, ಆಧಾರ್‌ಕಾರ್ಡ್ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಹಾಜರುಪಡಿಸಿ, ಕೋವಿಡ್-19 ನಿಯಮ ಪಾಲಿಸಿ, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ನೋಂದಣಿ ಹಿರಿತನದ ಆಧಾರದಲ್ಲಿ ಲಭ್ಯವಿರುವ ಆಹಾರ ಸಾಮಾಗ್ರಿಗಳ ಕಿಟ್‌ಗಳನ್ನು ಪಡೆದುಕೊಳ್ಳುವಂತೆ ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.
Next Story





