ಮರಣಪತ್ರ ಬರೆದಿಟ್ಟು ಆತ್ಮಹತ್ಯೆ: ಮೃತದೇಹ ಪತ್ತೆ

ಬ್ರಹ್ಮಾವರ, ಜು.10: ಮರಣ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಬೈಕಾಡಿ ಕಾಮೇಶ್ವರ ದೇವಸ್ಥಾನ ವಠಾರದ ನಿವಾಸಿ ಶ್ರೀಧರ್ ಮಯ್ಯ(60) ಎಂಬವರ ಮೃತದೇಹ ಇಂದು ಬೆಳಗ್ಗೆ 8.45ರ ಸುಮಾರಿಗೆ ಹೇರೂರು ಗ್ರಾಮದ ಸಂತೆ ಕಟ್ಟೆ ಸೇತುವೆ ಕೆಳಗೆ ಹೊಳೆಯಲ್ಲಿ ಪತ್ತೆಯಾಗಿದೆ.
ವಿಪರೀತ ಕಾಲು ನೋವು ಹಾಗೂ ಬಿಕ್ಕಳಿಕೆ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಶ್ರೀಧರ್ ಮಯ್ಯ, ನನ್ನ ಸಾವಿಗೆ ನಾನೇ ಕಾರಣ ಎಂದು ರಿಜಿಸ್ಟರ್ ಪತ್ರವನ್ನು ಕಾಮೇಶ್ವರ ದೇವಸ್ಥಾನದ ಮುಖ್ಯಸ್ಥ ಹರೀಶ್ ಹೊಳ್ಳರ ಹೆಸರಿಗೆ ಬರೆದು ಜು.8ರಂದು ಸಂಜೆ ಮನೆಯಿಂದ ನಾಪತ್ತೆಯಾಗಿದ್ದರು.
ಇದೇ ಚಿಂತೆಯಲ್ಲಿ ಇವರು ಸಂತೆಕಟ್ಟೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





