Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: 181 ಕೋಟಿ ರೂ. ಬೃಹತ್ ಮೊತ್ತದ...

ಕಲಬುರಗಿ: 181 ಕೋಟಿ ರೂ. ಬೃಹತ್ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಿಎಸ್‌ವೈ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 July 2021 11:17 PM IST
share

ಕಲಬುರಗಿ, ಜು. 10: ಲೊಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ.ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ `ಲೋಕೋಪಯೋಗಿ ಭವನ' ಸೇರಿದಂತೆ ಕಲಬುರಗಿ ಜಿಲ್ಲೆಯ 181 ಕೋಟಿ ರೂ.ಬೃಹತ್ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ಶನಿವಾರ ಇಲ್ಲಿನ ನೂತನ ಲೋಕೋಪಯೋಗಿ ಭವನದಲ್ಲಿ ಆಯೋಜಿಸಲಾದ ಭವ್ಯ ಕಾರ್ಯಕ್ರಮದಲ್ಲಿ ಲೊಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಆರೋಗ್ಯ ಇಲಾಖೆಯ ಒಟ್ಟು 16 ಕಾಮಗಾರಿಗಳಿಗೆ ಅಡಿಗಲ್ಲು, ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, `ಕಲಬುರಗಿ-ಶರಣ ಸಿರಸಗಿ, ಕಲಬುರಗಿ-ರಾಮ ಮಂದಿರ ನಡುವೆ ರೈಲ್ವೆ ರಸ್ತೆ ಮೇಲ್ಸೇತುವೆ ಲೋಕಾರ್ಪಣೆ, ಸಮಾಜ ಕಲ್ಯಾಣ ಇಲಾಖೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನೂತನ ಕಟ್ಟಡ, ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳ ಉದ್ಘಾಟನೆ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನೂತನ ಕಟ್ಟಡಗಳ ಉದ್ಘಾಟನೆ ಇಂದು ನೆರವೇರಿಸಲಾಗಿದೆ. 2 ವರ್ಷದಲ್ಲಿ ನೆರೆ ಪ್ರವಾಹ, ಕೋವಿಡ್ ಮಹಾಮಾರಿ ನಡುವೆಯೂ ಅಭಿವೃದ್ಧಿ ಕಾರ್ಯ ನಿರಂತರ ಸಾಗುತ್ತಿದ್ದು, ಈ ಅಭಿವೃದ್ಧಿ ಕಾರ್ಯಗಳು ಸಾಕ್ಷಿಯಾಗಿವೆ. ಸಮಗ್ರ ಕರ್ನಾಟಕದ ನಿರ್ಮಾಣ ನಮ್ಮ ಸರಕಾರದ ಗುರಿಯಾಗಿದೆ ಎಂದರು.

ನೀತಿ ಆಯೋಗದ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯದ ಅಂಕ ಮತ್ತು ಸ್ಥಾನದಲ್ಲಿ ಗಣನೀಯ ಸುಧಾರಣೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ಪ್ರಯತ್ನ ನಿರಂತರ ಸಾಗಿದೆ. ನಿರ್ಮಾಣ ಕಾರ್ಮಿಕರು ವಸತಿ ಸಮಸ್ಯೆಯನ್ನು ಎದುರಿಸುತ್ತಿರುವುದನ್ನು ಮನಗಂಡಿರುವ ಸರಕಾರ ಕಲಬುರಗಿ ಸೇರಿದಂತೆ 10 ಜಿಲ್ಲೆಗಳಲ್ಲಿ ಸುಸಜ್ಜಿತ ತಾತ್ಕಾಲಿಕ ವಸತಿ ಗೃಹ ಸೌಲಭ್ಯವನ್ನು ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯ ಸರಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 100 ಮನೆಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಪರಿಶಿಷ್ಟ ಜಾತಿಯವರಿಗೆ 3,200 ಕೋಟಿ ರೂ.ಗಳು ಹಾಗೂ ಪರಿಶಿಷ್ಟ ಪಂಗಡದವರಿಗೆ 1,270 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯ ನಿರ್ವಹಣೆ, ವಸತಿ ಶಾಲೆ ನಿರ್ವಹಣೆ ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದು, 11.73 ಲಕ್ಷ ಪರಿಶಿಷ್ಟ ಜಾತಿ ಹಾಗೂ 4.62 ಲಕ್ಷ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಸೌಲಭ್ಯ ಪಡೆದಿದ್ದಾರೆ ಎಂದರು.

ಕಲ್ಯಾಣ ಕರ್ನಾಟಕ ಅಭಿವೃದಿಗೆ ಸಂಕಲ್ಪ: ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸರಕಾರ ಅನೇಕ ಜನಪರ ಯೋಜನೆಗಳನ್ನು ರೂಪಿಸಿದೆ. 2021-22ನೆ ಸಾಲಿಗೆ ಕೆಕೆಆರ್‍ಡಿಬಿಗೆ 1,500ಕೋಟಿ ರೂ.ಅನುದಾನ ಹಂಚಿಕೆ ಮಾಡಿ ಕ್ರಿಯಾ ಯೋಜನೆಗೂ ಅನುಮೋದನೆ ನೀಡಿದೆ. ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಲಯಗಳು, ಕೈಗಾರಿಕೆ, ಕೌಶಲ್ಯಾಭಿವೃದ್ಧಿ, ನೀರಾವರಿ, ಕುಡಿಯುವ ನೀರು, ರಸ್ತೆ ಮತ್ತು ಸಂಪರ್ಕ, ಅಂತರ್ಜಲ ಸಂರಕ್ಷಣೆ, ಕೃಷಿ ವಲಯದಲ್ಲಿ ಈ ಅನುದಾನ ವಿನಿಯೋಗಿಸಲಾಗುತ್ತಿದೆ.

ಕೋವಿಡ್ ಸಂಕಷ್ಟದ ನಡುವೆಯೂ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಯಾವುದೇ ಅನುದಾನ ಕಡಿತ ಮಾಡಿಲ್ಲ. ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಮಾನವ ಸಂಪನೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘವನ್ನು ರಚಿಸಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ದೃಢ ಸಂಕಲ್ಪವಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯ ಸರಕಾರವು ಕೋವಿಡ್ ಎರಡನೆ ಅಲೆಯನ್ನು ಸಮರ್ಥವಾಗಿ ನಿರ್ವಹಿಸಿದ್ದು, 3ನೆ ಅಲೆ ಇನ್ನಷ್ಟು ಕಠಿಣವಾದ ಸಂದರ್ಭವನ್ನು ಸೃಷ್ಟಿಸಲಿದೆ ಎನ್ನುವುದು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ತಡೆಗಟ್ಟಲು ಸರಕಾರ ಸನ್ನದ್ಧವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್ ನಮ್ಮಿಂದ ಇನ್ನೂ ದೂರವಾಗಿಲ್ಲ ಎಂಬುದನ್ನು ಎಲ್ಲರು ಮನಗಂಡು ಮಾಸ್ಕ್ ಧರಿಸುವುದು, ಸ್ವಚ್ಛತೆ, ವ್ಯಕ್ತಿಗತ ಅಂತರ ಹಾಗೂ ನಿರಂತರ ಸ್ಯಾನಿಟೈಸ್ ಬಳಕೆಯ ನಡವಳಿಕೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X