ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ತಿರುವನಂತಪುರ, ಜು. 10: ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಕೇರಳದ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಭಾರತದ ಹವಾಮಾನ ಇಲಾಖೆ ಜುಲೈ 12ರಂದು ರೆಡ್ ಅಲರ್ಟ್ ಘೋಷಿಸಿದೆ. ರವಿವಾರ ವಯನಾಡ್, ಕೋಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಆರಂಜ್ ಅಲರ್ಟ್ ಹಾಗೂ ಪಾಲಕ್ಕಾಡ್, ತ್ರಿಶೂರ್, ಇಡುಕ್ಕಿ ಹಾಗೂ ಎರ್ನಾಕುಳಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳ ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಜುಲೈ 10ರಿಂದ 13ರ ವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಕೇರಳ ಕರಾವಳಿಯ ನೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story





