ಕಡಬ: ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಕಾಡಾನೆ
![ಕಡಬ: ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಕಾಡಾನೆ ಕಡಬ: ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಕಾಡಾನೆ](https://www.varthabharati.in/sites/default/files/images/articles/2021/07/11/298395-1626000212.jpg)
ಕಡಬ, ಜು.11. ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ರವಿವಾರ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ.
ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ. ಈ ರಸ್ತೆಯ ಮೂಲಕ ತೆರಳುವವರು ಜಾಗ್ರತೆಯಿಂದ ಸಂಚರಿಸುವಂತೆ ಸ್ಥಳೀಯರು ತಿಳಿಸಿದ್ದಾರೆ.
Next Story