ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಹಮ್ಮದ್ ಶಮೀರ್ ಕಾಟಿಪಳ್ಳ ಆಯ್ಕೆ
![ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಹಮ್ಮದ್ ಶಮೀರ್ ಕಾಟಿಪಳ್ಳ ಆಯ್ಕೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಹಮ್ಮದ್ ಶಮೀರ್ ಕಾಟಿಪಳ್ಳ ಆಯ್ಕೆ](https://www.varthabharati.in/sites/default/files/images/articles/2021/07/11/298399-1626004599.jpeg)
ಮಂಗಳೂರು: ಉತ್ತರ ವಿಧಾನ ಸಭಾ ಕ್ಷೇತ್ರದ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮುಹಮ್ಮದ್ ಶಮೀರ್ ಕಾಟಿಪಳ್ಳ ಆಯ್ಕೆಯಾಗಿದ್ದಾರೆ.
ಮಾಜಿ ಶಾಸಕ ಮೊಯ್ದಿನ್ ಬಾವ ಅವರ ಶಿಫಾರಸಿನಂತೆ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನಿರ್ದೇಶನದ ಮೇರೆಗೆ ದ.ಕ. ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರು ನೇಮಕಾತಿ ಆದೇಶ ಪತ್ರ ನೀಡಿದರು.
ಮುಹಮ್ಮದ್ ಶಮೀರ್ ಅವರು ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ನಲ್ಲಿ ಹಲವಾರು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಬೈಕಂಪಾಡಿಯ ಮುಹಮ್ಮದ್ ಸಾಲಿಹ್ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಗಾಯ್ಸ್ ಇಲೆವನ್ ತಂಡದ ಅಧ್ಯಕ್ಷರಾಗಿ, ಕಾಟಿಪಳ್ಳ ಸಂಘ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮುಹಮ್ಮದ್ ಶಮೀರ್ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕಾರ್ಪೋರೇಟರ್ ಹಾಜಿ. ಪಿ. ಬಶೀರ್ ಅಹ್ಮದ್ ಅವರ ಪುತ್ರ.
Next Story