ಉಡುಪಿ : ರವಿವಾರ 92 ಮಂದಿಯಲ್ಲಿ ಕೊರೋನ ಪಾಸಿಟಿವ್
ಉಡುಪಿ, ಜು.11: ಜಿಲ್ಲೆಯಲ್ಲಿ ರವಿವಾರ ಒಟ್ಟು 92 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ದಿನದಲ್ಲಿ 93 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದು, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 901 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಕೊರೋನಕ್ಕೆ ಯಾರೂ ಬಲಿಯಾಗಿಲ್ಲ.ಇಂದು ಪಾಸಿಟಿವ್ ದೃಢಪಟ್ಟ 92 ಮಂದಿಯಲ್ಲಿ 52 ಮಂದಿ ಪುರುಷರು ಹಾಗೂ 40 ಮಂದಿ ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 32, ಕುಂದಾಪುರ ತಾಲೂಕಿನ 25, ಕಾರ್ಕಳ ತಾಲೂಕಿನ 32 ಮಂದಿಹಾಗೂ ಹೊರಜಿಲ್ಲೆಗಳ ಮೂವರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. 16 ಮಂದಿ ಕೋವಿಡ್ ಆಸ್ಪತ್ರೆ ಹಾಗೂ ಉಳಿದ 76 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಶನಿವಾರ 93 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 66,305 ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3772 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ ಈಗ 67,607ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,13,185 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಜಿಲ್ಲೆಯಲ್ಲಿ ರವಿವಾರ ಯಾರಲ್ಲೂ ಬ್ಲಾಕ್ಫಂಗಸ್ ಸೋಂಕು ಪತ್ತೆಯಾಗಿಲ್ಲ. ಒಟ್ಟು 9 ಮಂದಿ ಸೋಂಕಿಗಾಗಿ ಚಿಕಿತ್ಸೆ ಪಡೆಯುತಿದ್ದಾರೆ.
745 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 745 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 524 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 221 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್ಓ ಡಾ.ಉಡುಪ ತಿಳಿಸಿದ್ದಾರೆ. ಇಂದು 18ರಿಂದ 44 ವರ್ಷದೊಳಗಿನ 175 ಮಂದಿ ಹಾಗೂ 45 ವರ್ಷ ಮೇಲಿನ 570 ಮಂದಿ ಲಸಿಕೆಯನ್ನು ಪಡೆದಿದ್ದಾರೆ.