ಬೆಂಗಳೂರು: ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.11: ನಗರದ ಕೋಣನಕುಂಟೆ ವ್ಯಾಪ್ತಿಯ ಗಾರ್ಮೆಂಟ್ಸ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಅಪಾರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.
ರವಿವಾರ ಈ ಘಟನೆ ನಡೆದಿದ್ದು, ಇಲ್ಲಿನ ಕೋಣನಕುಂಟೆ ಕ್ರಾಸ್ಸ್ ಸಮೀಪದ ಡೈಡಿ ಡೀಡ್ ಗಾಮೆರ್ಂಟ್ಸ್ ಕಾರ್ಖಾನೆಯಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದಾಗಿ, ಕಾರ್ಖಾನೆಯ ಇತರೆ ಭಾಗಕ್ಕೂ ವ್ಯಾಪಿಸಿದ ಪರಿಣಾಮ, ಧಗಧಗಿಸಿ ಹೊತ್ತಿ ಉರಿಯುತ್ತಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಆಗ್ನಿ ಶಾಮಕ ಸಿಬ್ಬಂದಿಗಳು, ಸುಮಾರು ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
Next Story





