ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಾವಿರಾರು ಭಕ್ತರಿಂದ ದೇವರ ದರ್ಶನ

ಉಡುಪಿ, ಜು.11: ಕೊರೋನಾ ಲಾಕ್‌ಡೌನ್‌ನಿಂದಾಗಿ ಕಳೆದ ಮೂರು ತಿಂಗಳಿನಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ನಿರ್ಧರಿಸಿರು ವಂತೆ ಭಕ್ತರು ಮಾಸ್ಕ್ ಧರಿಸಿ ಅಂತರ ಕಾಪಾಡಿಕೊಂಡು ಮಧ್ಯಾಹ್ನ 2ಗಂಟೆ ಯಿಂದ ಸಂಜೆ 6ರತನಕ ಶ್ರೀಕೃಷ್ಣಮುಖ್ಯಪ್ರಾಣ ದೇವರ ದರ್ಶನ ಪಡೆದರು. 150 ಮಂದಿ ಸ್ಥಳೀಯರು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಒಟ್ಟು 1160 ಮಂದಿ ಭಕ್ತರು ದೇವರ ದರ್ಶನ ಪಡೆದರು ಎಂದು ಮಠದ ಮೂಲಗಳು ತಿಳಿಸಿವೆ.
Next Story





