Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಆರ್ ಎಸ್ ಸುತ್ತ ಗಣಿಗಾರಿಕೆ...

ಕೆಆರ್ ಎಸ್ ಸುತ್ತ ಗಣಿಗಾರಿಕೆ ನಿಷೇಧಿಸಿ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 July 2021 10:10 PM IST
share
ಕೆಆರ್ ಎಸ್  ಸುತ್ತ ಗಣಿಗಾರಿಕೆ ನಿಷೇಧಿಸಿ: ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹ

ಮೈಸೂರು,ಜು.11: ರಾಜ್ಯ ಸರ್ಕಾರ ತಜ್ಞರ ವರದಿ ಆಧರಿಸಿ ಕೆಆರ್ ಎಸ್ ಜಲಾಶಯದ ಸುತ್ತ ನಡೆಯುತ್ತಿರುವ ಎಲ್ಲ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,  ಹಳೇ ಮೈಸೂರು ಭಾಗಕ್ಕೆ ಈ ಆಣೆಕಟ್ಟೆ ಜೀವನಾಡಿ. ಆದರೆ, ನಿರಂತರವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಡ್ಯಾಮ್‍ಗೆ ಅಪಾಯ ಎದುರಾಗಿದೆ. ಡ್ಯಾಮ್‍ನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಸಂಪೂರ್ಣವಾಗಿ ನಿಷೇಧಿಸಬೇಕು ಎಂದರು. 

ಸುಮಲತಾ ಅವರು ಡ್ಯಾಮ್ ಬಿರುಕು ಬಿಟ್ಟಿದೆ ಎಂದರೆ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಏಕೆ ರೇಗಾಡಬೇಕು? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ಅವರ ಹೇಳಿಕೆ ಹಿಂದಿರುವ ಹಿತಾಸಕ್ತಿ ಏನೆಂಬುದನ್ನು ಜನತೆಗೆ ತಿಳಿಸಬೇಕು. ಮಂಡ್ಯದ ಶಾಸಕರು ಮತ್ತು ಮಾಜಿ ಶಾಸಕರು ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರನ್ನು ಕಾಪಾಡುವ ಉದ್ದೇಶದಿಂದ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು  ಎಚ್.ಡಿ.ಕುಮಾರಸ್ವಾಮಿ ನಿಲುವನ್ನು ಖಂಡಿಸಿದರು.

ಗಣಿ ಸಚಿವ ಮುರುಗೇಶ್ ನಿರಾಣಿ ಮತ್ತು ಮಂಡ್ಯದ ಜೆಡಿಎಸ್ ಶಾಸಕರ ನಡುವೆ ಒಳ ಒಪ್ಪಂದವಾಗಿದೆ. ಮೈಶುಗರ್ ಕಾರ್ಖಾನೆ ತಂಟೆಗೆ ಶಾಸಕರು ಹೋಗದಂತೆ ಹಾಗೂ ಗಣಿಗಾರಿಕೆ ತಂಟೆಗೆ ಸಚಿವ ನಿರಾಣಿ ಬಾರದಂತೆ ಒಳ ಒಪ್ಪಂದವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂಬ ಗುಮಾನಿ ಈಗಾಗಲೇ ಮಂಡ್ಯದ ಜನರಲ್ಲಿ ಶುರುವಾಗಿದೆ ಎಂದರು.

ಕೆಆರ್ ಎಸ್ ಡ್ಯಾಮ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿದರೆ, ಪ್ರಾಣ ಬೆದರಿಕೆ ಬರಲಿದೆ. ಈ ಬಗ್ಗೆ ಧ್ವನಿ ಎತ್ತಿದ ಬಹುಪಾಲು ಮಂದಿ ಅದೃಶ್ಯರಾಗಿದ್ದಾರೆ. ಗಣಿಗಾರಿಕೆಯಿಂದ ಮುಂದೆ ಕೆಆರ್ ಎಸ್ ಡ್ಯಾಮ್‍ಗೆ ಅಪಾಯ ಇರುವುದಂತೂ ನಿಜ. ಒಂದು ವೇಳೆ ಡ್ಯಾಮ್ ಒಡೆದರೆ ಮುಂದಾಗುವ ಅನಾಹುತವನ್ನು ಊಹಿಸಿಕೊಳ್ಳಲು ಅಸಾಧ್ಯ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾಸ್ವಾಮಿ ಹಾಗೂ ಜೆಡಿಎಸ್ ಶಾಸಕರು ಗಂಭೀರವಾಗಿ ಯೋಚಿಸಬೇಕು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡ ಅಶ್ವತ್ಥನಾರಾಯಣ ರಾಜೇ ಅರಸ್, ಪ್ರಸನ್ನ, ಮರಂಕಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜನಪ್ರತಿನಿಧಿಯಾಗಿ ಸಂಸದೆ ಸುಮಲತಾ ಎತ್ತಿರುವ ಧ್ವನಿ ಸರಿಯಾಗಿದ್ದು, ಅವರ ನಿಲುವನ್ನು ನಾವು ಬೆಂಬಲಿಸುವುದಲ್ಲದೇ, ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ರೈತ ಸಂಘವೂ ಬೆಂಬಲ ನೀಡಲಿದೆ. ಆಣೆಕಟ್ಟೆ ರಕ್ಷಿಸಿ, ಗಣಿಗಾರಿಕೆ ನಿಲ್ಲಿಸಿ ಎಂಬ ಹೋರಾಟವನ್ನು ಯಾರೇ ಮಾಡಿದರೂ, ಅದಕ್ಕೆ ನಮ್ಮ ಬೆಂಬಲವಿದೆ.

ಬಡಗಲಪುರ ನಾಗೇಂದ್ರ,         
-ರಾಜ್ಯ ರೈತ ಸಂಘದ ಅಧ್ಯಕ್ಷ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X