Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ : ಹಳ್ಳಿ ಹಳ್ಳಿಗಳಿಗೆ ತೆರಳಿ...

ಬಂಟ್ವಾಳ : ಹಳ್ಳಿ ಹಳ್ಳಿಗಳಿಗೆ ತೆರಳಿ ಆರೋಗ್ಯ ಸೇವೆ ನೀಡಲಿರುವ ಸಂಚಾರಿ ಐಸಿಯು ಬಸ್

ಜು.13ರಂದು ಶಾಸಕ ರಾಜೇಶ್ ನಾಯ್ಮ್ ರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 July 2021 10:39 PM IST
share
ಬಂಟ್ವಾಳ : ಹಳ್ಳಿ ಹಳ್ಳಿಗಳಿಗೆ ತೆರಳಿ ಆರೋಗ್ಯ ಸೇವೆ ನೀಡಲಿರುವ ಸಂಚಾರಿ ಐಸಿಯು ಬಸ್

ಬಂಟ್ವಾಳ, ಜು.11: ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಕೈ ಜೋಡಿಸುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿಯು ಸಾರಿಗೆ ಸುರಕ್ಷಾ-ಐಸಿಯು ಬಸ್ಸನ್ನು ವಿನ್ಯಾಸಗೊಳಿಸಿದ್ದು, ಬಂಟ್ವಾಳದ ಜನತೆಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಒಂದು ಐಸಿಯು ಬಸ್ಸು ಈಗಾಗಲೇ ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಘಟಕವನ್ನು ತಲುಪಿದೆ.

ದಕ್ಷಿಣ ಕನ್ನಡ, ಉಡುಪಿ, ಕೊಡುಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ಹಾಗೂ ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ ವ್ಯಾಪ್ತಿಯಲ್ಲಿ ಇದೇ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಐಸಿಯು ಬಸ್ಸು ಬಂಟ್ವಾಳಕ್ಕೆ ಆಗಮಿಸಿದೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಜೂ. 17ರಂದು ಉಪಮುಖ್ಯಮಂತ್ರಿಯಾಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿ ಐಸಿಯು ಬಸ್ಸು ನೀಡುವ ಕುರಿತು ಚರ್ಚಿಸಿದ್ದು, ಡಿಸಿಎಂ ಒಪ್ಪಿಗೆ ಸೂಚಿಸಿದ್ದರು. 

ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಈಗಾಗಲೇ ಬಸ್ಸಿನ ವ್ಯವಸ್ಥೆಗಳ ಕುರಿತು ತಾಂತ್ರಿಕ ಸಿಬಂದಿ ಪರಿಶೀಲಿಸಿದ್ದು, ಎಲ್ಲಾ ಘಟಕಗಳು ಕಾರ್ಯಾಚರಣೆಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ಆಂಬ್ಯುಲೆನ್ಸ್ ರೀತಿಯಲ್ಲೇ ಸೈರನ್ ವ್ಯವಸ್ಥೆಯನ್ನು ಬಸ್ಸು ಒಳಗೊಂಡಿದ್ದು, ಒಳಭಾಗಕ್ಕೆ ಹೊಕ್ಕರೆ ಮಿನಿ ಕ್ಲಿನಿಕ್‌ನ ರೀತಿಯ ವ್ಯವಸ್ಥೆ ಇರುತ್ತದೆ. ಹಿಂದಿನ ಭಾಗದಲ್ಲಿ ರೋಗಿಗಳು ಪ್ರವೇಶಿಸುವ ವ್ಯವಸ್ಥೆ ಇರುತ್ತದೆ. 

ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಐಸಿಯು ಬಸ್ಸು ಎಲ್ಲಾ ವ್ಯವಸ್ಥೆಗಳನ್ನು ಒಳಗೊಂಡಿದ್ದು, ಐದು ಹಾಸಿಗೆಗಳು, ಪ್ರತಿ ಬೆಡ್‌ಗಳಿಗೂ ಆಕ್ಸಿಜನ್ ವ್ಯವಸ್ಥೆ, ರೋಗಿಗಳ ರಕ್ತದೊತ್ತಡ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಮೊದಲಾದವುಗಳನ್ನು ಮಾನಿಟರ್ ಮಾಡುವ ವ್ಯವಸ್ಥೆ ಇರುತ್ತದೆ. 

ಐವಿ ವ್ಯವಸ್ಥೆ, ವೆಂಟಿಲೇಟರ್ ಅಳವಡಿಸುವ ಸೌಲಭ್ಯ, ತುರ್ತು ಔಷಧ ವ್ಯವಸ್ಥೆ, ತುರ್ತು ಅಗತ್ಯಗಳಿಗೆ ಜನರೇಟರ್ ವ್ಯವಸ್ಥೆಯೂ ಇದೆ. ಜತೆಗೆ ನೋಟಿಸ್ ಬೋರ್ಡ್, ರೋಗಿಗಳ ಶೀಘ್ರ ಗುಣಮುಖರಾಗುವ ಕುರಿತು ಬರಹಗಳು ಕೂಡ ಇವೆ. 

ಜು. 13ರಂದು ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದಲ್ಲಿ ಪೊಳಲಿ ಕ್ಷೇತ್ರದಲ್ಲಿ ಸಾರಿಗೆ ಸುರಕ್ಷಾ ಐಸಿಯು ಬಸ್ಸಿಗೆ ಚಾಲನೆ ದೊರೆಯ ಲಿದ್ದು, ಬಳಿಕ ಬಂಟ್ವಾಳ ಪ್ರತಿ ಗ್ರಾಮಗಳಿಗೆ ತೆರಳಿ ಸಂಚಾರಿ ಆಸ್ಪತ್ರೆಯ ರೀತಿಯಲ್ಲಿ ಬಸ್ಸು ಕಾರ್ಯನಿರ್ವಹಿಸಲಿದೆ. ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬಂದಿ ರೋಗಿಗಳ ತಪಾಸಣೆಯ ಜತೆಗೆ ಅಗತ್ಯ ಔಷಧ ನೀಡುವ ಕಾರ್ಯ ನಿರ್ವಹಿಸಲಿದ್ದಾರೆ. ಈ ಬಸ್ಸು ಕ್ರಮವಾಗಿ ಸಂಚರಿಸಿದರೆ ಸರಾಸರಿಯಾಗಿ ೨ ತಿಂಗಳಿಗೊಮ್ಮೆ ಬಸ್ಸು ಒಂದು ಗ್ರಾಮಕ್ಕೆ ಭೇಟಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

''ಶಾಸಕ ರಾಜೇಶ್ ನಾಯ್ಕ್ ಅವರ ವಿಶೇಷ ಪ್ರಯತ್ನದಿಂದ ಬಸ್ಸು ಬಂಟ್ವಾಳಕ್ಕೆ ಆಗಮಿಸಿದ್ದು, ಅವರ ನಿರ್ದೇಶನದಂತೆ ಹಳ್ಳಿ ಹಳ್ಳಿಗೆ ತೆರಳಿ ಸಂಚಾರಿ ಆಸ್ಪತ್ರೆಯ ರೀತಿಯಲ್ಲಿ ಬಸ್ಸು ಕೆಲಸ ಮಾಡುತ್ತದೆ. ಘಟಕದ ಚಾಲಕರು ಅದರ ಚಾಲನೆ ಮಾಡಲಿದ್ದು, ಆರೋಗ್ಯ ಇಲಾಖೆ ವೈದ್ಯರು, ಸಿಬಂದಿ ರೋಗಿಗಳ ತಪಾಸಣೆ ನಡೆಸಲಿದ್ದಾರೆ. ಪ್ರತಿದಿನ ಬಸ್ಸು ಬಿ.ಸಿ.ರೋಡು ಘಟಕಕ್ಕೆ ಆಗಮಿಸಲಿದೆ''.

- ಶ್ರೀಶ ಭಟ್, ಘಟಕ ವ್ಯವಸ್ಥಾಪಕರು, ಕೆಎಸ್‌ಆರ್‌ಟಿಸಿ, ಬಿ.ಸಿ.ರೋಡು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X