ಜು.13: ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ‘ನೇರ ಫೋನ್ ಇನ್’
ಮಂಗಳೂರು, ಜು.11: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯು ಜು.19 ಹಾಗೂ 22ರಂದು ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಸಂದೇಹ ಪರಿಹರಿಸಲು ಜು.13ರಂದು ಬೆಳಗ್ಗೆ 10:30ಕ್ಕೆ ದ.ಕ. ಜಿಲ್ಲೆಯ ವಿದ್ಯಾರ್ಥಿಗಳಿಗೆ ‘ನೇರ ಫೋನ್ ಇನ್’ ಕಾರ್ಯಕ್ರಮ ಆಯೋಜಿಸಲಾಗಿದೆ.
ಪರೀಕ್ಷೆ ಕುರಿತು ಜಿಲ್ಲೆಯಲ್ಲಿ ಕೈಗೊಂಡಿರುವ ತಯಾರಿ ಹಾಗೂ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಮಾನ, ಸಂದೇಹಗಳು ಇದ್ದಲ್ಲಿ ಪ್ರಶ್ನೆ ಕೇಳಿ ಪರಿಹರಿಸಿಕೊಳ್ಳಲು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯು ಆಕಾಶವಾಣಿ ಮಂಗಳೂರು ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ದೂ.ಸಂ.: 0824-2211999, 8277038000ನ್ನು ಸಂಪರ್ಕಿಸುವ ಮೂಲಕ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಯೋಜನ ಪಡೆಯಲು ಸಾರ್ವಜನಿಕ ಶಿಕ್ಷಣ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕರು (ಆಡಳಿತ) ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story