Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೊಬೈಲ್ ನೆಟ್ ವರ್ಕ್ ಸಮಸ್ಯೆ ಪರಿಹಾರಕ್ಕೆ...

ಮೊಬೈಲ್ ನೆಟ್ ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ12 July 2021 2:26 PM IST
share
ಮೊಬೈಲ್ ನೆಟ್ ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ : ಸಚಿವ ಸುರೇಶ್ ಕುಮಾರ್

ಬೆಂಗಳೂರು:  ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗು ವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬಂಧದಲ್ಲಿ ಸೋಮವಾರ  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಚರ್ಚಿಸಿದರು. 

ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ.

ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ  ಪರ್ಯಾಯ ಬೋಧನಾ ಕ್ರಮಗಳಾದ ಆನ್ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆಯಾಗಿರುವುದರಿಂದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು  ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೋನ ಭೀತಿಯ ಪರಿಸ್ಥಿತಿಯಲ್ಲಿ ಭೌತಿಕ ಶಾಲಾ ತರಗತಿಗಳು ಆರಂಭವಾಗುತ್ತಿರುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ, ಎಲ್ಲ ಮಕ್ಕಳಿಗೂ  ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್ಲೈನ್ ವ್ಯವಸ್ಥೆಯನ್ನೇ ನೆಚ್ಚಿಕೊಂಡಿರುವಂತಹ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್ ಬಲಪಡಿಸುವುದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡ ಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿಯವರೂ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ  ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ:

ಡಿಜಿಟಲ್ ಶಿಕ್ಷಣ  ಇಲ್ಲವೇ ಆನ್ ಲೈನ್ ನ್ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪ ಬೇಕಾಗಿರುವ ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧದಲ್ಲಿ ಸೋಮವಾರ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ. ದೊರೆಸ್ವಾಮಿಯವರೊದಿಗೆ  ವಿಧಾನಸೌಧದ ತಮ್ಮ ಕಚೇರಿಯಲ್ಲಿ    ಚರ್ಚಿಸಿದ ಸಚಿವರು, ರಾಜ್ಯದಲ್ಲಿ ರುವ 5766 ಗ್ರಾಮ ಪಂಚಾಯತ್ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದ್ದಾರೆ.

ಈ ಸಂಬಂಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ  ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ ಎಂದು  ಸಚಿವರು ತಿಳಿಸಿದ್ದಾರೆ.

ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ ಉತ್ತಮಗೊಳಿಸುವುದು ಸೇರಿದಂತೆ ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಕುರಿತಂತೆ  ಎಸ್ ಎಸ್ ಎಲ್ ಸಿ ಪರೀಕ್ಷಾವಧಿ ಮುಗಿದ ಕೂಡಲೇ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗುವುದು. ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್ ಈ ಎಲ್ಲ ಅಂಶಗಳನ್ನು ಅವಲೋಕಿಸಿ ಪ್ರಾಯೋಗಿಕ ಕ್ರಮಗಳ ಕುರಿತಂತೆ ಕ್ರಿಯಾಯೋಜನೆ ರೂಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನುಪ್ ಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X