ಬಂಟ್ವಾಳ: ಕಾಂಗ್ರೆಸ್ ವತಿಯಿಂದ 'ಸೈಕಲ್ ಜಾಥ', ಪ್ರತಿಭಟನಾ ಮೆರವಣಿಗೆ
ಬೆಲೆ ಏರಿಕೆ ತಡೆಗಟ್ಟಲು ಕೇಂದ್ರ ಸರಕಾರ ವಿಫಲ: ರಮಾನಾಥ ರೈ

ಬಂಟ್ವಾಳ, ಜು.12: ತೈಲ, ಗ್ಯಾಸ್ ಹಾಗೂ ಆಹಾರ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ 'ಸೈಕಲ್ ಜಾಥ' ಹಾಗೂ ಪ್ರತಿಭಟನಾ ಮೆರವಣಿಗೆ ಸೋಮವಾರ ಬಂಟ್ವಾಳದಲ್ಲಿ ನಡೆಯಿತು.
ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಬಡ್ಡಕಟ್ಟೆಯಲ್ಲಿ ಹನುಮಾನ್ ದೇವಸ್ಥಾನದ ಬಳಿ ಚಾಲನೆ ನೀಡಿದರು. ಬಳಿಕ ಬಿ.ಸಿ.ರೋಡಿನ ಮೇಲ್ಸ್ ತುವೆಯ ಕೆಳಭಾಗದಲ್ಲಿ ಸಂಪನ್ನಗೊಂಡ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ , ಬಿಜೆಪಿ ಭಾವನಾತ್ಮಕ ವಿಚಾರ ಎತ್ತಿ ಜನರ ದಾರಿ ತಪ್ಪಿಸುವ ಮೂಲಕ ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದು, ತೈಲಬೆಲೆ ಮತ್ತು ಆಹಾರ ಸಾಮಾಗ್ರಿಗಳನ್ನು ತಡೆಗಟ್ಟುವಲ್ಲಿ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ವಿ.ಪ. ಸದಸ್ಯ,ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕೊರೋನ ಮಹಾಮಾರಿಯಂತ ಸಂಕಷ್ಟಕಾಲದಲ್ಲಿ ತೈಲ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಕೊಡಲಿಯೇಟು ನೀಡಿದೆ ಎಂದು ಟೀಕಾ ಪ್ರಹಾರಗೈದರು.
ಬಂಟ್ವಾಳ ಕ್ಷೇತ್ರದ ವೀಕ್ಷಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತಿಗೌಡ, ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ಜಿಪಂ ನಿಕಟ ಪೂರ್ವಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಸಾಹುಲ್ ಹಮೀದ್, ಪದ್ಮಶೇಖರ ಜೈನ್, ಎಂ.ಎಸ್.ಮುಹಮ್ಮದ್, ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಅಸಂಘಟಿತ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಅಬ್ಬಾಸ್ ಅಲಿ, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಮೋಹನ್ ಗೌಡ ಕಲ್ಮಂಜ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ವೀಣಾ ಭಟ್, ಭೂಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಲವೀನಾ ವಿಲ್ಮಾ ಮೋರಸ್, ಮಲ್ಲಿಕಾ ಶೆಟ್ಟಿ, ಸದಾಶಿವ ಬಂಗೇರ, ಪದ್ಮನಾಭ ರೈ, ಶೋಭಿತ್ ಪೂಂಜಾ, ಇಬ್ರಾಹೀಂ ನವಾಝ್, ಸುರೇಶ್ ಜೋರ, ಪ್ರಶಾಂತ್ ಕುಲಾಲ್, ಮುಹಮ್ಮದ್ ನಂದಾವರ, ಆಲ್ಬಟ್೯ ಮೆನೇಜಸ್ ಮೊದಲಾದವರಿದ್ದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್ ಸ್ವಾಗತಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು.










