Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಆರ್‌ಎಸ್ ಡ್ಯಾಂ ಸುತ್ತ ಕಲ್ಲು...

ಕೆಆರ್‌ಎಸ್ ಡ್ಯಾಂ ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಸಚಿವ ಡಾ‌.ನಾರಾಯಣಗೌಡ

ವಾರ್ತಾಭಾರತಿವಾರ್ತಾಭಾರತಿ12 July 2021 5:35 PM IST
share
ಕೆಆರ್‌ಎಸ್ ಡ್ಯಾಂ ಸುತ್ತ ಕಲ್ಲು ಗಣಿಗಾರಿಕೆ ಸಂಪೂರ್ಣ ಸ್ಥಗಿತಕ್ಕೆ ತೀರ್ಮಾನ: ಸಚಿವ ಡಾ‌.ನಾರಾಯಣಗೌಡ

ಮಂಡ್ಯ, ಜು.12: ಕೆಆರ್‌ಎಸ್ ಡ್ಯಾಂ ಸುತ್ತ ಕಲ್ಲುಗಣಿಗಾರಿಕೆಯನ್ನೇ ನಿಲ್ಲಿಸಬೇಕು. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲು  ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ಡ್ಯಾಂ ಇರುವ ಪ್ರದೇಶದಲ್ಲಿ ಗಣಿಗಾರಿಕೆ ಸ್ಥಗಿತ ಮಾಡಲು ಅವಕಾಶವಿದೆ. ತಕ್ಷಣವೇ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಯು ಚರ್ಚೆ ನಡೆಸುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹೇಳಿದರು.

ಅವರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲ್ಲು ಗಣಿಗಾರಿಕೆ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕೆಆರ್‌ಎಸ್ ವಿಚಾರ ಸದ್ಯ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಗಣಿ ಪ್ರದೇಶದಲ್ಲಿ ಬ್ಲಾಸ್ಟ್ ಮಾಡುವುದರಿಂದ ಡ್ಯಾಂ ಗೆ ಡ್ಯಾಮೇಜ್ ಆಗತ್ತೆ ಎಂಬ ಕೂಗು ಬಹಳದಿನಗಳಿಂದ ಇದೆ. ಹೀಗಾಗಿ ಡ್ಯಾಂ ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆಯನ್ನೇ ಸ್ಥಗಿತಮಾಡುವುದು ಉತ್ತಮ. ದೇಶದ ಬೇರೆ ಬೇರೆ ಅಣೆಕಟ್ಟು ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ನಿಲ್ಲಿಸಿರುವ ಉದಾಹರಣೆ ಇದೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕ್ರಮ ತೆಗೆದುಕೊಳ್ಳುವುದು ಉತ್ತಮ. ಅಗತ್ಯವಿದ್ದಲ್ಲಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಸುವವರಿಗೆ ಪರ್ಯಾಯ ಸ್ಥಳ ಗುರುತಿಸಿ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳೋಣ. ಅಲ್ಲದೆ ಬೇಬಿ ಬೆಟ್ಟದಲ್ಲಿ ಪ್ರವಾಸೋಧ್ಯಮಕ್ಕೆ ಅನುಕೂಲವಾಗುವಂತೆ ಯೋಜನೆ ರೂಪಿಸಿ ಎಂದು ಸಚಿವರು ಹೇಳಿದರು.

ಅಧಿಕಾರಿಗಳಿಗೆ ಛಳಿ ಬಿಡಿಸಿದ ಸಚಿವರು

ಗಣಿಗಾರಿಕೆ ನಡೆಸುವ ಪ್ರದೇಶದಕ್ಕೆ ಅಧಿಕಾರಿಗಳು ಭೇಟಿ ಕೊಡುವುದೇ ಇಲ್ಲ‌. ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಕಲ್ಲು ತೆಗೆಯುತ್ತಿದ್ದಾರೆ ಎನ್ನುವ ಮಾಹಿತಿಯೆ ಇಲ್ಲ. ಕೆಲ ಅಧಿಕಾರಿಗಳ ಶಾಮೀಲಾತಿ ಹಾಗೂ ನಿರ್ಲಕ್ಷ್ಯದಿಂದಲೇ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದೆ.  ಕೆಆರ್‌ಎಸ್ ಡ್ಯಾಂ ಸುತ್ತ ಗಣಿಗಾರಿಕೆ ಇದೆ. ಅಲ್ಲಿ ಬ್ಲಾಸ್ಟ್ ಮಾಡಿದಾಗ ಸುತ್ತಲ ಪ್ರದೇಶದ ಜನರಿಗೆ ಗೊತ್ತಾಗುತ್ತೆ. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿಯೇ ಇಲ್ಲ. ಇದು ಬೇಲಿಯೆ ಎದ್ದು ಹೊಲ ಮೇಯ್ದ ರೀತಿಯಂತಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇನ್ನುಮುಂದೆ ಕಡ್ಡಾಯವಾಗಿ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಬೇಕು. ಸರಿಯಾಗಿ ರಾಜಧನ ಸಂಗ್ರಹ ಮಾಡಬೇಕು ಎಂದು ಸೂಚಿಸಿದರು. ನಮ್ಮ ಜಿಲ್ಲೆಯಲ್ಲಿ 95 ಕ್ಕು ಹೆಚ್ಚು ಕಲ್ಲುಗಣಿಗಾರಿಕೆ ಇದೆ. ಬೇರೆ ಜಿಲ್ಲೆಗಳಲ್ಲಿ ಇದಕ್ಕಿಂತ ಕಡಿಮೆ ಇದೆ. ಅಲ್ಲಿ ಸಾವಿರಾರು ಕೋಟಿ ರಾಜಧನ ಸಂಗ್ರಹವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಸರಿಯಾಗಿ ರಾಯಲ್ಟಿ ಸಂಗ್ರಹವಾಗುತ್ತಿಲ್ಲ. ಅಧಿಕಾರಿಗಳು ತಕ್ಷಣ ಎಲ್ಲ ಲೊಪ ದೋಷ ಸರಿಪಡಿಸಬೇಕು ಎಂದು ಖಡಕ್ ಎಚ್ವರಿಕೆ ನೀಡಿದರು.

ಅಕ್ರಮ ತಡೆಗೆ ಸಹಾಯವಾಣಿ ಆರಂಭ

ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ತಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಜೊತೆಗೆ ಜನಸಾಮಾನ್ಯರ ನೆರವನ್ನೂ ಪಡೆಯಬೇಕು. ಜಿಲ್ಲೆಯಲ್ಲಿ ಎಲ್ಲೇ ಅಕ್ರಮವಾಗಿ ಗಣಿಗಾರಿಕೆ ನಡೆದರೆ, ಬ್ಲಾಸ್ಟ್ ಮಾಡಿದರೆ ತಕ್ಷಣ ಆ ಪ್ರದೇಶದ ಜನಸಾಮಾನ್ಯರಿಗೆ ತಿಳಿಯುತ್ತದೆ. ಸಹಾಯವಾಣಿ ತೆರೆಯುವುದರಿಂದ ಜನರು ಆ ಕ್ಷಣವೇ ಮಾಹಿತಿ ನೀಡುತ್ತಾರೆ. ಇದರಿಂದ ಅಕ್ರಮ ತಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಹಾಯವಾಣಿ ಕೇಂದ್ರ ತೆರೆದು ಜನಸಾಮಾನ್ಯರಿಗೆ ಆ ಬಗ್ಗೆ ಮಾಹಿತಿ ನೀಡಬೇಕು  ಎಂದು ಸಚಿವರು ಸೂಚಿಸಿದರು. 

ಜಿಲ್ಲೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಗೆ ಟಾಸ್ಕ್ ಪೋರ್ಸ್ ರಚನೆಯಾಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೊಲಿಸ್ ಇಲಾಖೆ, ಆರ್ ಟಿ ಓ, ಕಂದಾಯ, ಪಂಚಾಯತರಾಜ್ ಇಲಾಖೆ ಹಾಗೂ ಅರಣ್ಯ ಇಲಾಖೆ ಒಳಗೊಂಡ ಟಾಸ್ಕ್ ಪೋರ್ಸ್ ರಚನೆಯಾಗಬೇಕು‌. ತಕ್ಷಣವೆ ಸರ್ವೆ ನಡೆಸಿ, ವರದಿ ನೀಡಬೇಕು. ಎಲ್ಲ ಕಡೆ ತಪಾಸಣಾ ಕೇಂದ್ರ ಮಾಡಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳ ಪಟ್ಟಿಯನ್ನು ತಕ್ಷಣ ನೀಡಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಬರಬೇಕಾದ ಕೋಟಿ ಕೋಟಿ ರೂಪಾಯಿ ಆದಾಯ ನಷ್ಟವಾಗುತ್ತಿದೆ. ತಪಾಸಣಾ ಕೇಂದ್ರದಲ್ಲಿ ಸಿಸಿಕ್ಯಾಮರಾ ಅಳವಡಿಕೆ ಆಗಬೇಕು. ಕಲ್ಲು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕು. ಈ ಬಗ್ಗೆ ಅಧಿಕಾರಿಗಳು ಪ್ರತಿದಿನ ನಿಗಾ ಇಡಬೇಕು ಎಂದು ಹೇಳಿದರು. 

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್‌. ಅಶ್ವಥಿ, ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಅಶ್ವಿನಿ, ಸಿಇಯೋ ದಿವ್ಯ ಪ್ರಭು, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿ ಪದ್ಮಜಾ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X