ಉಡುಪಿ: ಮಂಗಳವಾರ ಕೋವಿಡ್ ಲಸಿಕಾ ಲಭ್ಯತೆ ವಿವರ
ಉಡುಪಿ, ಜು.12: ಜಿಲ್ಲೆಯಲ್ಲಿ ಜು.13ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಜುಲೈ 20ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ.
ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಲಂಕಾರ್ ಥಿಯೇಟರ್ ಬಳಿ ಇರುವ ಹಳೆ ಕಟ್ಟಡದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತ ರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆ ಲಭ್ಯವಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





