Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಝೀಕಾ ವೈರಸ್ ಬಗ್ಗೆ ಎಚ್ಚರವಹಿಸಿ: ಉಡುಪಿ...

​ಝೀಕಾ ವೈರಸ್ ಬಗ್ಗೆ ಎಚ್ಚರವಹಿಸಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್

ವಾರ್ತಾಭಾರತಿವಾರ್ತಾಭಾರತಿ12 July 2021 8:39 PM IST
share
​ಝೀಕಾ ವೈರಸ್ ಬಗ್ಗೆ ಎಚ್ಚರವಹಿಸಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ, ಜು.12: ಕೊರೋನ ನಡುವೆಯೇ ಇದೀಗ ಝೀಕಾ ವೈರಸ್ ತಲ್ಲಣ ಸೃಷ್ಟಿಸುತ್ತಿದೆ. ಈಗಾಗಲೇ ಕೇರಳದಲ್ಲಿ ಝೀಕಾ ವೈರಸ್ ಖಚಿತ ಪ್ರಕರಣ ಗಳು ವರದಿಯಾಗಿದ್ದು, ಈ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾದ ಉಡುಪಿ ಜಿಲ್ಲೆಯಲ್ಲೂ ವಿಶೇಷ ಕಟ್ಟೆಚ್ಚರ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಝೀಕಾ ವೈರಸ್ ಹರಡುವ ವಿಧಾನ, ರೋಗಲಕ್ಷಣಗಳ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಇದನ್ನು ತಡೆಯುವ ನಿಟ್ಟನಲ್ಲಿ ಈ ಕೆಳಗಿನ ಎಲ್ಲಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಿದ್ದಾರೆ.

ರೋಗ ಹರಡುವ ವಿಧಾನ:
*ಡೆಂಗಿ/ಚಿಕುಂಗುನ್ಯಾ, ವೆಸ್ಟನೈಲ್ ಹಾಗೂ ಹಳದಿ ಜ್ವರವನ್ನು ಹರಡುವ ಸೊಳ್ಳೆಗಳಾದ ಈಡೀಸ್ ಜಾತಿಯ ಹೆಣ್ಣು ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆುು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.

*ಡೆಂಗಿ/ಚಿಕುಂಗುನ್ಯಾ, ವೆಸ್ಟನೈಲ್ ಹಾಗೂ ಹಳದಿ ಜ್ವರವನ್ನು ಹರಡುವ ಸೊಳ್ಳೆಗಳಾದ ಈಡೀಸ್ ಜಾತಿಯ ಹೆಣ್ಣು ಸೊಳ್ಳೆಗಳು ಕಚ್ಚುವುದರಿಂದ ಝೀಕಾ ವೈರಸ್ ಖಾಯಿಲೆಯು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ.

*ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿುಯದ ಮೂಲಕವೂ ಹರಡುತ್ತವೆ.

*ಝೀಕಾ ವೈರಸ್ ಕೇವಲ ಸೊಳ್ಳೆಗಳ ಕಡಿತದಿಂದ ಹರಡುವುದಲ್ಲದೇ ರಕ್ತದ ವರ್ಗಾವಣೆ, ಅಸುರಕ್ಷಿತ ಲೈಂಗಿಕತೆ ಮುಂತಾದ ದೇಹದ ದ್ರವಗಳ ವಿನಿಮಯದ ಮೂಲಕವೂ ಹರಡುತ್ತವೆ. *ಸದ್ಯದ ಮಳೆಗಾಲ ಈ ವೈರಸ್ ಹರಡಲು ಅನುಕೂಲಕರವಾದ ವಾತಾವರಣ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳ ಸಾಂದ್ರತೆ ಜಾಸ್ತಿ ಇರುತ್ತದೆ. ಈ ಸೊಳ್ಳೆಗಳುಸಾಮಾನ್ಯವಾಗಿ ಹಗಲಿನಲ್ಲಿ ಕಚ್ಚುತ್ತವೆ.

ರೋಗ ಲಕ್ಷಣಗಳು: ತೀವ್ರತರವಾದ ಜ್ವರ, ಮೈ-ಕೈ ನೋವು, ಕೀಲುಗಳಲ್ಲಿ ನೋವು, ದೇಹದ ಮೇಲೆ ಕೆಂಪು ರಕ್ತ ಮಿಶ್ರಿತ ಗುಳ್ಳೆಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣವಾಗಿದೆ. ರಕ್ತ ಹಾಗೂ ಮೂತ್ರವನ್ನು ಪರೀಕ್ಷಿಸಿದಾಗ ಈ ರೋಗದ ಸೋಂಕು ಇರುವುದು ಕಂಡುಬರುತ್ತದೆ.

ಸಂಭವಿಸಬಹುದಾದ ಅಪಾಯ:
*ಗರ್ಭಿಣಿಯರು ಝೀಕಾ ವೈರಸ್ ಸೋಂಕಿಗೆ ಒಳಗಾಗಿದ್ದರೆ ಗರ್ಭಪಾತವಾಗುವ ಸಾಧ್ಯತೆ ಇದೆ ಹಾಗೂ ಹುಟ್ಟಲಿರುವ ಮಗುವಿಗೂ ಕೂಡ ಸೋಂಕು ವಾನೆಯಾಗುವ ಸಾಧ್ಯತೆ ಇರುತ್ತದೆ.
*ಹುಟ್ಟುವ ಮಕ್ಕಳಲ್ಲಿ ಅಂಗಾಗ ನ್ಯೂನತೆ (ಮೈಕ್ರೋಸೆಫಲಿ -ಅಂದರೆ ಮಗುವಿನ ಮೆದುಳಿನ ಬೆಳವಣಿಗೆ ಕುಂಠಿತವಾಗುವುದು) ಕಾಣಿಸಿಕೊಳ್ಳುವ ಸಾಧ್ಯತೆಯೂ ಹೆಚ್ಚಾಗಿದೆ.
*ವಯಸ್ಕರಲ್ಲಿ ತೀವ್ರತರವಾದ ನರಗಳ ದೌರ್ಬಲ್ಯ (Guillain-barre syndrome) ವಿರಳವಾಗಿ ಕಾಣಿಸಿಕೊಳ್ಳಬಹುದು.
ರೋಗ ಲಕ್ಷಣ ಕಂಡು ಬಂದರೆ ಏನು ಮಾಡಬೇಕು:
*ಇದುವರೆಗೆ ಈ ಕಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ.
*ಇದುವರೆಗೆ ಈ ಕಾಯಿಲೆಗೆ ಯಾವುದೇ ಲಸಿಕೆ ಕಂಡುಹಿಡಿದಿಲ್ಲ.

*ಸಾಕಷ್ಟು ದ್ರವ ಆಹಾರಗಳನ್ನು ಸೇವಿಸುವುದರ ಮೂಲಕ ನಿರ್ಜಲೀಕರಣವನ್ನು ತಡೆಯಬೇಕು.

*ಸಾಕಷ್ಟು ವಿಶ್ರಾಂತಿಯನ್ನು ಪಡೆಯಬೇಕು.

*ಯಾವುದೇ ಜ್ವರವಿರಲಿ ತಕ್ಷಣವೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆದುಕೊಳ್ಳಬೇಕು.

ಸೊಳ್ಳೆಗಳ ಉತ್ಪತ್ತಿ ತಾಣಗಳು: ಈ ಸೊಳ್ಳೆಗಳು ಹಗಲು ಹೊತ್ತು ಕಚ್ಚುತ್ತವೆ. ಡ್ರಮ್, ಬ್ಯಾರೆಲ್, ನೀರಿನ ತೊಟ್ಟಿ, ಏರ್‌ಕೂಲರ್, ಅನುಪಯುಕ್ತ ಟೈರ್, ಒಡೆದ ಮಡಕೆ, ತೆಂಗಿನ ಚಿಪ್ಪು, ತಾರಸಿ ಮನೆಗಳ ಮೇಲ್ಚಾವಣಿ, ಘನತ್ಯಾಜ್ಯ ವಸ್ತುಗಳು, ಅಡಿಕೆ ತೋಟಗಳಲ್ಲಿ ಬಿದ್ದಿರುವ ಹಾಳೆಗಳು, ರಬ್ಬರ ತೋಟಗಳಲ್ಲಿ ರಬ್ಬರ ಸಂಗ್ರಹಿಸುವ ಕಫ್, ಹೂವಿನ ಕುಂಡ ಇತ್ಯಾದಿಗಳಲ್ಲಿ ನೀರು ನಿಂತು ಈಡಿಸ್ ಸೊಳ್ಳೆ ಉತ್ಪತ್ತಿಯಾಗುತ್ತದೆ.

ಸಾರ್ವಜನಿಕರ ಪಾತ್ರ:
*ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು.

*ಮನೆ ಪರಿಸರ, ಅಂಗಡಿ ಮುಂಗಟ್ಟುಗಳಲ್ಲಿ ಎಲ್ಲಿಯೂ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು.

*ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸಬೇಕು.

*ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸದಂತೆ ಮನೆಯ ಕಿಟಕಿ ಬಾಗಿಲುಗಳಿಗೆ ಜಾಲರಿ ಅಳವಡಿಸಬೇಕು.

*ಹೊರಾಂಗಣದಲ್ಲಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಹಾಗೂ ವಿಶ್ರಾಂತಿ ಪಡೆಯುವಾಗ ಮತ್ತು ಮಲಗುವಾಗ ವಿಶೇಷವಾಗಿ ಗರ್ಭಿಣಿಯರು/ವಯಸ್ಕರು ಮತ್ತು ಮಕ್ಕಳು ಕೀಟನಾಶಕ ಲೇಪಿತ ಸೊಳ್ಳೆ ರದೆಗಳನ್ನು ಉಪಯೋಗಿಸಬೇಕು.

*ನೀರಿನ ತೊಟ್ಟಿ/ಟ್ಯಾಂಕ್‌ನ್ನು ಕನಿಷ್ಟ ಪಕ್ಷ ವಾರಕ್ಕೊಮ್ಮೆಯಾದರೂ ಪೂರ್ತಿ ಖಾಲಿ ಮಾಡಿ ತಿಕ್ಕಿ ಚೆನ್ನಾಗಿ ತೊಳೆಯಬೇಕು.

*ಬಯಲಿನಲ್ಲಿ ತ್ಯಾಜ್ಯ ವಸ್ತುಗಳಾದ ಟೈರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು ಹಾಗೂ ಅವುಗಳನ್ನು ಸೂ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು.

*ಸಾಧ್ಯವಾದಷ್ಟು ಮೈ ಮುಚ್ಚುವಂತೆ ಬಟ್ಟೆ ಧರಿಸಬೇಕು.

*ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದು. ಸೊಳ್ಳೆ ಕಚ್ಚದಂತೆ ಎಲ್ಲಾ ರೀತಿಯ ಸ್ವಯಂರಕ್ಷಣಾ ವಿಧಾನಗಳನ್ನು ಅನುಸರಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X