ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ಮದ್ಯದ ಬಾಟಲಿ ಎಸೆದ ದುಷ್ಕರ್ಮಿಗಳು

ಬೆಂಗಳೂರು, ಜು.12: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುರಿತು ಹೇಳಿಕೆ ನಡುವೆ ಸಿನೆಮಾ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಮದ್ಯದ ಬಾಟಲಿ ಎಸೆದಿರುವ ಆರೋಪ ಕೇಳಿಬಂದಿದೆ.
ಇಲ್ಲಿನ ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ತಡರಾತ್ರಿ ದುಷ್ಕರ್ಮಿಗಳು ಬೈಕ್‍ನಲ್ಲಿ ಬಂದು ಮದ್ಯದ ಬಾಟಲಿ ಎಸೆದು ಪರಾರಿಯಾಗಿದ್ದಾರೆ. ಸೋಮವಾರ ಮುಂಜಾನೆ ಮನೆಯ ಭದ್ರತಾ ಸಿಬ್ಬಂದಿ ನೋಡಿದಾಗ ಮದ್ಯದ ಬಾಟಲಿ ಚೂರುಗಳು ಬಿದ್ದಿರುವುದು ಗೊತ್ತಾಗಿದೆ.
ಕೂಡಲೇ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಇಬ್ಬರು ಯುವಕರು ಕೃತ್ಯ ಎಸಗಿರುವುದು ತಿಳಿದು ಬಂದಿದೆ. ಈ ವಿಚಾರವನ್ನು ರಾಕ್‍ಲೈನ್ ವೆಂಕಟೇಶ್ ಗಮನಕ್ಕೆ ತರಲಾಗಿದೆ. ಬಳಿಕ ಸ್ಥಳೀಯ ಫೋಲೀಸರಿಗೆ ನಡೆದ ವಿಚಾರದ ಬಗ್ಗೆ ಮೌಖಿಕವಾಗಿ ತಿಳಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ರಾಕ್‍ಲೈನ್ ಮನೆ ಬಳಿ ಪೊಲೀಸರನ್ನು ನಿಯೋಜಿಸಿ ಭದ್ರತೆ ಕಲ್ಪಿಸಲಾಗಿದೆ.
Next Story





