ಮಡಿಕೇರಿ: ಅಬ್ಬಿ ಜಲಪಾತ ಪ್ರವಾಸಿಗರಿಗೆ ಮುಕ್ತ

ಮಡಿಕೇರಿ ಜು.12 : ಕೋವಿಡ್ ಆತಂಕದ ಹಿನ್ನೆಲೆ ಕಳೆದ 80 ದಿನಗಳಿಂದ ಬಂದ್ ಆಗಿದ್ದ ಹೆಸರುವಾಸಿ ಪ್ರವಾಸಿತಾಣ ಅಬ್ಬಿ ಜಲಪಾತ ವೀಕ್ಷಣೆಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.
ಕೆ.ನಿಡುಗಣೆ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಅಬ್ಬಿ ಜಲಪಾತವನ್ನು ಪ್ರವಾಸಿಗರ ವೀಕ್ಷಣೆಗೆ ಮುಕ್ತಗೊಳಿಸುವ ಸಂದರ್ಭ ಪಂಚಾಯತ್ ಅಧ್ಯಕ್ಷ ಕೊಕ್ಕಲೇರ ಅಯ್ಯಪ್ಪ, ಸದಸ್ಯರಾದ ಜಾನ್ಸನ್ ಪಿಂಟೋ, ಬಿ.ಎಂ.ಸತೀಶ್, ಪಿ.ಸಿ.ರಘು, ಅನಿತ, ಪುಷ್ಪಲತಾ ಅಭಿವೃದ್ಧಿ ಅಧಿಕಾರಿ ಸೆಲ್ವಿ ಜಯಕುಮಾರ್ ಮತ್ತಿತರರು ಹಾಜರಿದ್ದರು.
ನೂರಾರು ಪ್ರವಾಸಿಗರು ಅಬ್ಬಿ ಜಲಪಾತದ ಸೊಬಗು ನೋಡಲು ತೆರಳಿದರು. ಮಾಸ್ಕ್ ಧರಿಸುವುದು ಕಡ್ಡಾಯ ಮತ್ತು ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಎಚ್ಚರ ವಹಿಸುವಂತೆ ಗ್ರಾ.ಪಂ ಪ್ರತಿನಿಧಿಗಳು ಪ್ರವಾಸಿಗರಿಗೆ ತಿಳಿಸಿದರು.
Next Story





